ಬೆತುಲ್, ಮಧ್ಯಪ್ರದೇಶ: ಒಳ ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನಿಂದ ಆಕ್ರೋಶಗೊಂಡು ಸಾಮಾಜಿಕ ಜಾಲತಾಣದಲ್ಲಿ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ಗೆ ಜೀವ ಬೆದರಿಕೆ ಒಡ್ಡಿದ್ದ ಆರೋಪದ ಮೇಲೆ ಮಧ್ಯಪ್ರದೇಶದ ಭೀಮ್‌ಸೇನಾ ಸಂಘಟನೆಯ ಉಸ್ತುವಾರಿ ಪಂಕಜ್ ಅತುಲ್‌ಕರ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.