ನವದೆಹಲಿ: ಭೀಮಾ ಕೋರೆಗಾಂವ್ ಪ್ರಕರಣ ಸಂಬಂಧ ಕಳೆದ 5 ವರ್ಷಗಳಿಂದ ಬಂಧನದಲ್ಲಿದ್ದ ಇಬ್ಬರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
ವರ್ನಾನ್ ಗೊನ್ಸಲ್ವೆಸ್ ಹಾಗೂ ಅರುಣ್ ಫೆರಾರೆ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.
ನ್ಯಾಯಮೂರ್ತಿಗಳಾದ ಅನುರಾಧ ಬೋಸ್ ಹಾಗೂ ಸುಧಾಂಶು ಧುಲಿಯಾ ಅವರಿದ್ದ ಪೀಠ ಷರತ್ತುಬದ್ಧ ಜಾಮೀನು ನೀಡಿ ಆದೇಶಿಸಿದೆ.
ಇವರಿಬ್ಬರು ಮಹಾರಾಷ್ಟ್ರ ತೊರೆಯಕೂಡದು ಹಾಗೂ ಪಾಸ್‌ಪೋರ್ಟ್‌ಗಳನ್ನು ಪೊಲೀಸರಿಗೆ ಒಪ್ಪಿಸಬೇಕು ಎಂದು ಸೂಚನೆ ನೀಡಿದೆ.
ಇಬ್ಬರಿಗೂ ತಲಾ ಒಂದು ಮೊಬೈಲ್ ಬಳಕೆ ಮಾಡಲು ಅನುಮತಿ ನೀಡಲಾಗಿದ್ದು, ಅವರು ಉಳಿಯುವ ವಿಳಾಸದ ಬಗ್ಗೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳಕ್ಕೆ ಮಾಹಿತಿ ನೀಡಬೇಕು. ಇಬ್ಬರ ಫೋನ್ ಲೋಕೇಷನ್ ನಿತ್ಯವೂ ಆನ್ ಇರಬೇಕು, ವಾರಕ್ಕೊಮ್ಮೆ ತನಿಖಾಧಿಕಾರಿಗೆ ವರದಿ ನೀಡಬೇಕು ಎಂದು ಜಾಮೀನು ನೀಡುವಾಗ ಸುಪ್ರೀಂ ಕೋರ್ಟ್ ಹೇಳಿದೆ.