ಗುವಾಹಟಿ: ಅಸ್ಸಾಂ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಭೂಪೇನ್ ಕುಮಾರ್ ಬೋರಾ ಅವರು ಪಕ್ಷಕ್ಕೆ ಸಲ್ಲಿಸಿದ್ದ ರಾಜೀನಾಮೆಯನ್ನು ಹಿಂಪಡೆದಿದ್ದಾರೆ.

ಹೈಕಮಾಂಡ್ ಮಧ್ಯ ಪ್ರವೇಶದಿಂದಾಗಿ ಅವರು ರಾಜೀನಾಮೆ ಹಿಂದಕ್ಕೆ ಪಡೆದಿದ್ದಾರೆ ಎಂದು ಎಐಸಿಸಿ ರಾಜ್ಯ ಉಸ್ತುವಾರಿ ಜಿತೇಂದ್ರ ಸಿಂಗ್ ಸೋಮವಾರ ತಿಳಿಸಿದ್ದಾರೆ.

ಬೋರಾ ಅವರು ರಾಜೀನಾಮೆ ಪತ್ರವನ್ನು ಹೈಕಮಾಂಡ್ಗೆ ಸಲ್ಲಿಸಿದ ಕೆಲ ಹೊತ್ತಿನಲ್ಲೇ ಅವರ ನಿವಾಸಕ್ಕೆ ತೆರಳಿದ ಅಸ್ಸಾಂ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗೌರವ್ ಗೊಗೊಯಿ ಮಾತುಕತೆ ನಡೆಸಿ, ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಬೋರಾ ಅವರು, ‘ರಾಜೀನಾಮೆ ನಿರ್ಧಾರವನ್ನು ಮರುಪರಿಶೀಲಿಸಲು ಸಮಯಾವಕಾಶ ಕೋಡಿ ಎಂದು ಹೈಕಮಾಂಡ್ ಬಳಿ ಕೇಳಿದ್ದೇನೆ’ ಎಂದು ಹೇಳಿದರು.

‘ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬೋರಾ ಜತೆ ಮಾತನಾಡಿದ್ದಾರೆ. ಅವರ ರಾಜೀನಾಮೆಯನ್ನು ಹೈಕಮಾಂಡ್ ಅಂಗೀಕರಿಸುವುದಿಲ್ಲ’ ಎಂದು ಗೊಗೊಯಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

‘ಪಕ್ಷದಲ್ಲಿನ ಕೆಲ ವಿಷಯಗಳಿಂದ ಬೋರಾ ಅವರಿಗೆ ನೋವಾಗಿದ್ದರೆ, ಕ್ಷಮೆಯಾಚಿಸುತ್ತೇವೆ’ ಎಂದು ಗೊಗೊಯಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.