ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐದು ದಿನಗಳ ಭೇಟಿಗೆ ಭಾರತಕ್ಕೆ ಬಂದ ಭೂತಾನ್‌ ಪ್ರಧಾನಿ ಟೊಬಗೆ

Published 14 ಮಾರ್ಚ್ 2024, 10:11 IST
Last Updated 14 ಮಾರ್ಚ್ 2024, 10:11 IST
ಅಕ್ಷರ ಗಾತ್ರ

ನವದೆಹಲಿ: ಭೂತಾನ್‌ ಪ್ರಧಾನಿ ಶೆರಿಂಗ್‌ ಟೊಬಗೆ ಅವರು ತಮ್ಮ 5 ದಿನಗಳ ಭಾರತ ಪ್ರವಾಸಕ್ಕಾಗಿ ಗುರವಾರ ರಾಷ್ಟ್ರ ರಾಜಧಾನಿಗೆ ಬಂದಿಳಿದಿದ್ದಾರೆ. ಜನವರಿಯಲ್ಲಿ ಅಧಿಕಾರವಹಿಸಿಕೊಂಡ ಬಳಿಕ ಟೊಬಗೆ ಅವರ ಮೊದಲ ವಿದೇಶ ‍ಪ್ರವಾಸ ಇದಾಗಿದೆ.  

ಉಭಯ ರಾಷ್ಟ್ರಗಳ ಬಾಂಧವ್ಯ ವೃದ್ಧಿಯ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ಭೂತಾನ್ ಪ್ರಧಾನಿಯೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಭಾರತಕ್ಕೆ ಆಗಮಿಸಿದ ಟೊಬಗೆ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ಅಶ್ವಿನಿ ಕುಮಾರ್‌ ಚೌಬೆ ಅವರು ಸ್ವಾಗತಿಸಿದ್ದಾರೆ. 

ಟೊಬಗೆ ಅವರ ಭೇಟಿಯು ಭಾರತ ಮತ್ತು ಭೂತಾನ್‌ ನಡುವೆ ಇರುವ ಉತ್ತಮ ಸ್ನೇಹಕ್ಕೆ ಉದಾಹರಣೆಯಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್‌ ಜೈಸ್ವಾಲ್‌ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಇಂಧನ ದಕ್ಷತೆಯ ಕ್ಷೇತ್ರದಲ್ಲಿ ಸಹಕಾರವನ್ನು ವಿಸ್ತರಿಸುವ ಕುರಿತು ಭಾರತ ಮತ್ತು ಭೂತಾನ್ ನಡುವೆ ಒಡಂಬಡಿಕೆಗೆ ಒಪ್ಪಂದಕ್ಕೆ (ಎಂಒಯು) ಸಹಿ ಹಾಕಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT