ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಂಪೂರ್ಣ ಬಲ ಬಳಸಿ ನನ್ನ ಮೇಲೆ ಹಲ್ಲೆ ನಡೆಸಿದ ಕೇಜ್ರಿವಾಲ್ ಆಪ್ತ : ಮಾಲಿವಾಲ್

Published 17 ಮೇ 2024, 9:32 IST
Last Updated 17 ಮೇ 2024, 9:32 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ಅವರು, ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಅವರಿಗೆ ಹಲವು ಬಾರಿ ಕಪಾಳಕ್ಕೆ ಹೊಡೆದು, ಕಾಲಿನಿಂದ ಒದ್ದಿದ್ದಾರೆ. ಆಕೆ ಸಹಾಯಕ್ಕಾಗಿ ಜೋರಾಗಿ ಕೂಗಿದರೂ ಕರುಣೆ ತೋರಲಿಲ್ಲ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಕೇಜ್ರಿವಾಲ್ ಅವರ ಅಧಿಕೃತ ನಿವಾಸದಲ್ಲಿ ಸೋಮವಾರ ನಡೆದಿದೆ ಎನ್ನಲಾದ ಹಲ್ಲೆ ಕುರಿತಂತೆ ಶುಕ್ರವಾರ ಸಂತ್ರಸ್ತೆ ನ್ಯಾಯಾಧೀಶರ ಎದುರು ಹೇಳಿಕೆ ದಾಖಲಿಸಿದ್ದಾರೆ.

ಈ ಸಂಬಂಧ ದೆಹಲಿ ಪೊಲೀಸರು ಗುರುವಾರವೇ ಎಫ್‌ಐಆರ್ ದಾಖಲಿಸಿದ್ದು, ವಿಭವ್ ಕುಮಾರ್ ಅನ್ನು ಆರೋಪಿ ಎಂದು ಉಲ್ಲೇಖಿಸಿದ್ದಾರೆ.

ಸಹಾಯಕ್ಕಾಗಿ ಕೂಗಿಕೊಂಡರೂ ಕರುಣೆ ತೋರದ ಬಿಭವ್ ಕುಮಾರ್, ಮಾಲಿವಾಲ್ ಅವರ ಎದೆ, ಹೊಟ್ಟೆ ಮತ್ತು ದೇಹದ ಕೆಳಭಾಗಕ್ಕೆ ಒದ್ದಿದ್ದಾನೆ ಎಂದೂ ಉಲ್ಲೇಖಿಸಲಾಗಿದೆ.

ಬಿಭವ್ ನನ್ನ ಮೇಲೆ ಆತನ ಸಂಪೂರ್ಣ ಬಲ ಬಳಸಿ ಹಲ್ಲೆ ನಡೆಸಿದ್ದಾನೆ. ಏಳೆಂಟು ಬಾರಿ ಕಪಾಳಕ್ಕೆ ಹೊಡೆದಿದ್ದಾನೆ ಎಂದು ಮಾಲಿವಾಲ್ ದೂರಿನಲ್ಲಿ ತಿಳಿಸಿದ್ದಾರೆ.

ಸೋಮವಾರ ಬೆಳಿಗ್ಗೆ ದೆಹಲಿಯ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ ತೆರಳಿದ್ದ ಮಾಲಿವಾಲ್, ಕೇಜ್ರಿವಾಲ್ ಅವರ ಮನೆಯಲ್ಲಿ ಅವರ ಆಪ್ತ ಸಿಬ್ಬಂದಿಯೊಬ್ಬರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮಾಹಿತಿ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT