ಬೀದರ್: ‘ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಕಳೆದ 12 ವರ್ಷಗಳಲ್ಲಿ ದೇಶದ ಆರ್ಥಿಕ ಸ್ಥಿತಿ ಎಲ್ಲಿಗೆ ಮುಟ್ಟಿದೆ ಎಂದು ನೀವು ನೋಡಬಹುದು’ ಎಂದು ಕೆಕೆಆರ್ಡಿಬಿ ಅಧ್ಯಕ್ಷರೂ ಆದ ಶಾಸಕ ಅಜಯಸಿಂಗ್ ಹೇಳಿದರು.

ಈ ಹಿಂದೆ ನಾವು ಅಧಿಕಾರದಲ್ಲಿದ್ದಾಗ ₹70 ಇದ್ದ ಪೆಟ್ರೊಲ್ ಬೆಲೆ ಇಂದು ₹110ಕ್ಕೆ ತಲುಪಿದೆ. ಯುಪಿಎ ಸರ್ಕಾರದಲ್ಲಿ ₹400 ಸಿಲಿಂಡರ್ಗೆ ₹200 ಸಬ್ಸಿಡಿ ಇತ್ತು, ಇವತ್ತು ₹1000 ಆದರೂ ಸಬ್ಸಿಡಿ ಇಲ್ಲ. ನಮ್ಮ ದೇಶ ಸಂಕಷ್ಟದಲ್ಲಿರುವ ಬಗ್ಗೆ ಮೋದಿ ಅವರೇ ಹೇಳಿಕೆ ನೀಡಿದ್ದಾರೆ ಎಂದರು.

ಕಳೆದ 12 ವರ್ಷಗಳಲ್ಲಿ ಜಾತಿ ಧರ್ಮವನ್ನು ಬಿಟ್ಟರೆ ಬಿಜೆಪಿ ಸರ್ಕಾರ ಏನೂ ಮಾಡಿಲ್ಲ. ಕಳೆದ 40 ವರ್ಷಗಳಲ್ಲಿ ಅತಿ ಕಡಿಮೆ ಉದ್ಯೋಗ ಸೃಷ್ಟಿಯಾಗಿದ್ದು ಈ ಸರ್ಕಾರದ ಅವಧಿಯಲ್ಲಿ. ಅವರು ಕೇವಲ ದೊಡ್ಡದಾಗಿ ಭಾಷಣ ಮಾಡುತ್ತಾರೆ ಜನರು ಅದನ್ನ ಅರ್ಥ ಮಾಡ್ಕೋಬೇಕು’ ಎಂದರು.

‘ನಾನು 2018, 2023ರಿಂದಲೂ ಸಚಿವ ಸ್ಥಾನದ ಆಕಾಂಕ್ಷಿ. ಪಕ್ಷ ನನಗೆ ಭರವಸೆ ನೀಡಿದ್ದು ಒಳ್ಳೆ ಖಾತೆ ಸಿಗುವ ವಿಶ್ವಾಸವಿದೆ. ಕೆಕೆಆರ್ಡಿಬಿ ಅಧ್ಯಕ್ಷನಾಗಿ ಕಲ್ಯಾಣ ಕರ್ನಾಟಕ ಜನರ ಸೇವೆ ಮಾಡಿದ ನನಗೆ, ರಾಜ್ಯದ ಜನರ ಸೇವೆ ಮಾಡುವ ಅವಕಾಶ ಸಿಗಲಿದೆ’ ಎಂದು ಅಜಯ್ಸಿಂಗ್ ವಿಶ್ವಾಸ ವ್ಯಕ್ತಪಡಿಸಿದರು.

ಕೇರಳ ಚುನಾವಣೆ ಮುಗಿಯುವವರೆಗೂ ಸುಮ್ಮನಿರಲು ಹೈಕಮಾಂಡ್ ಸೂಚನೆ ನೀಡಿತ್ತು. ಮೇ18ರಂದು ಕೇರಳ ಮುಖ್ಯಮಂತ್ರಿಗಳು ಪ್ರಮಾಣ ವಚನವನ್ನು ಸ್ವೀಕರಿಸಲಿದ್ದಾರೆ. 20ರಂದು ರಾಜ್ಯದಲ್ಲಿ ಸಾಧನಾ ಸಮಾವೇಶ ನಡೆಯಲಿದೆ ಅದರ ನಂತರ ಪಕ್ಷದ ಪ್ರಮುಖ ನಾಯಕರು ದೆಹಲಿಗೆ ಹೋಗುವ ಸಾಧ್ಯತೆಗಳಿವೆ. ಆಗ ಹೈಕಮಾಂಡ್ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಬಹುದು ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-33-1328470249

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.