ಪಾಟ್ನಾ: ಕೊರೊನಾ ವೈರಸ್ ಸೋಂಕಿತರ ಚಿಕಿತ್ಸೆಯನ್ನು ಸರ್ಕಾರವೇ ಭರಿಸಲಿದ್ದು, ಸೋಂಕಿನಿಂದ ಸಾವು ಸಂಭವಿಸಿದರೆ 4 ಲಕ್ಷ ಪರಿಹಾರ ನೀಡಲಾಗುವುದು ಎಂದು ಬಿಹಾರ ಸರ್ಕಾರ ಘೋಷಿಸಿದೆ.

ಇಂದು ನಡೆದ ವಿಧಾನಸಭೆ ಅಧಿವೇಶನದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಈ ವಿಷಯ ತಿಳಿಸಿದರು.
’ಕೊರೊನಾ ವೈರಸ್ ಸೋಂಕಿಗೆ ಗುರಿಯಾಗುವವರ ಚಿಕಿತ್ಸಾ ವೆಚ್ಚವನ್ನು ಸರ್ಕಾರ ‘ಮುಖ್ಯಮಂತ್ರಿ ಚಿಕಿತ್ಸಾ ಸಹಾಯತಾ ಕೋಶ್ ಯೋಜನೆ’ಯ ಮೂಲಕ ಭರಿಸಲಿದೆ. ಒಂದು ವೇಳೆ ಈ ಕಾಯಿಲೆಯಿಂದ ಯಾವುದೇ ವ್ಯಕ್ತಿ ಮೃತಪಟ್ಟಿರೆ ಅವರ ಕುಟುಂಬಸ್ಥರಿಗೆ ‘ಮುಖ್ಯಮಂತ್ರಿ ಪರಿಹಾರ ನಿಧಿ’ಯಿಂದ ₹4 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.

ಕೋವಿಡ್ ಸೋಂಕಿನಿಂದ ಮೃತಪಟ್ಟವರ ಕುಟುಂಬಸ್ಥರಿಗೆ ಪರಿಹಾರ ಘೋಷಿಸಿದ ಮೊದಲ ರಾಜ್ಯ ಬಿಹಾರವಾಗಿದೆ. ದೇಶದಲ್ಲಿ ಇದುವರೆಗೆ ಕೊರೊನಾ ವೈರಸ್‌ನಿಂದ ಇಬ್ಬರು ಸಾವಿಗೀಡಾಗಿದ್ದಾರೆ. ಅದರಲ್ಲಿ ಒಬ್ಬರು ಕರ್ನಾಟಕದವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.