ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಹಾರ: ಗಂಗಾ ನದಿಯಲ್ಲಿ ದೋಣಿ ಮುಳುಗಿ 6 ಮಂದಿ ನಾಪತ್ತೆ

Published 16 ಜೂನ್ 2024, 9:05 IST
Last Updated 16 ಜೂನ್ 2024, 9:05 IST
ಅಕ್ಷರ ಗಾತ್ರ

ಪಟ್ನಾ(ಬಿಹಾರ): ‌ಪಟ್ನಾ ಜಿಲ್ಲೆಯ ಬಾರ್ಹ್ ಉಪವಿಭಾಗದ ಬಳಿ ಗಂಗಾ ನದಿಯಲ್ಲಿ ದೋಣಿ ಮುಳುಗಿ 6 ಜನ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಮಾನಾಥ ಗಂಗಾ ಘಾಟ್ ಬಳಿ ಇಂದು (ಭಾನುವಾರ) ಬೆಳಿಗ್ಗೆ 9.15ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. 17 ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿ ಗಂಗಾ ನದಿಯ ಮಧ್ಯದಲ್ಲಿ ಮುಳುಗಿದೆ. ಈವರೆಗೆ 11 ಜನರನ್ನು ರಕ್ಷಿಸಲಾಗಿದೆ. ಉಳಿದ 6 ಮಂದಿ ನಾಪತ್ತೆಯಾಗಿದ್ದಾರೆ ಎಂದು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಶುಭಂ ಕುಮಾರ್ ತಿಳಿಸಿದ್ದಾರೆ.

ಮಾಹಿತಿ ಪಡೆದ ಜಿಲ್ಲಾಡಳಿತದ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಸ್ಥಳೀಯರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ನಾಪತ್ತೆಯಾಗಿರುವರ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT