ಪಟ್ನಾ: ಬಿಹಾರದ ಗೋಪಾಲ್ಗಂಜ್ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸೇತುವೆಯ ಒಂದು ಭಾಗ ಕುಸಿದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಫೆಬ್ರುವರಿ 28ರಂದು ಸಂಭವಿಸಿದ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇದು ಸೇತುವೆ ನಿರ್ಮಾಣದ ಗುಣಮಟ್ಟದ ಮೇಲೆ ಬೆಳಕು ಚೆಲ್ಲುವಂತೆ ಮಾಡಿತ್ತು. ಗ್ರಾಮೀಣ ಅಭಿವೃದ್ಧಿ ಇಲಾಖೆ (ಆರ್ಡಬ್ಲ್ಯು) ಸೇತುವೆಯನ್ನು ನಿರ್ಮಿಸುತ್ತಿತ್ತು.

ಘಟನೆ ಸಂಬಂಧ ಮೇಲ್ವಿಚಾರಣೆಯಲ್ಲಿ ನಿರ್ಲಕ್ಷ್ಯ ಕಂಡುಬಂದ ಹಿನ್ನೆಲೆಯಲ್ಲಿ ಸಹಾಯಕ ಎಂಜಿನಿಯರ್ ಮತ್ತು ಆರ್ಡಬ್ಲ್ಯು ಜೂನಿಯರ್ ಎಂಜಿನಿಯರ್ ಇಬ್ಬರನ್ನೂ ಅಮಾನತುಗೊಳಿಸಲಾಗಿದೆ ಎಂದು ಗೋಪಾಲ್ಗಂಜ್ ಜಿಲ್ಲಾಧಿಕಾರಿ ಪವನ್ ಕುಮಾರ್ ಸಿನ್ಹಾ ತಿಳಿಸಿದ್ದಾರೆ.

ಸೇತುವೆಯನ್ನು ₹2.87 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಸೇತುವೆಯನ್ನು ನಿರ್ಮಿಸುತ್ತಿರುವ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುತ್ತೇವೆ ಎಂದು ಪವನ್ ಕುಮಾರ್ ತಿಳಿಸಿದ್ದಾರೆ.

2024ರಲ್ಲಿ ಬಿಹಾರವು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 10ಕ್ಕೂ ಹೆಚ್ಚು ಸೇತುವೆಗಳು ಹಠಾತ್ತನೆ ಕುಸಿದಿದ್ದವು. ಈ ಘಟನೆಗಳು ಸೇತುವೆಗಳ ಸಾಮರ್ಥ್ಯದ ಬಗ್ಗೆ ಕಳವಳ ಸೃಷ್ಟಿಸಿದ್ದವು. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಎಲ್ಲ ಹಳೆಯ ಸೇತುವೆಗಳ ಸಮೀಕ್ಷೆ ನಡೆಸಿ, ತುರ್ತು ದುರಸ್ತಿ ಅಗತ್ಯವಿರುವ ಸೇತುವೆಗಳ ಪಟ್ಟಿ ಸಲ್ಲಿಸುವಂತೆ ಗ್ರಾಮೀಣಾಭಿವೃದ್ಧಿ ಸಚಿವಾಲಯಕ್ಕೆ ಸೂಚಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.