ಪಟ್ನಾ: ಬಿಹಾರದಲ್ಲಿ ಗುರುವಾರ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಪುತ್ರ ನಿಶಾಂತ್ ಕುಮಾರ್ ಅವರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

‘ಎನ್ಡಿಎ ಕೂಟದ ಭಾಗವಾಗಿರುವ ಬಿಜೆಪಿ, ಜೆಡಿಯು, ಎಲ್ಜೆಪಿ, ಎಚ್ಎಎಂ ಮತ್ತು ಆರ್ಎಲ್ಎಂ ಪಕ್ಷಗಳಿಂದ ಒಟ್ಟು 27 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿಂದಿನಂತೆ 16:16:2:1:1ರ ಅನುಪಾತದಲ್ಲಿಯೇ ಸಚಿವ ಸಂಪುಟ ಇರಲಿದೆ. 12:11:2:1:1 ಅನುಪಾತದಲ್ಲಿ ಗುರುವಾರ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈಗಾಗಲೇ ಆರ್ಜೆಡಿಯಿಂದ ಇಬ್ಬರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆರು ಸ್ಥಾನಗಳನ್ನು ಖಾಲಿ ಉಳಿಸಲಾಗಿದೆ’ ಎಂದು ಬಿಜೆಪಿ ಉನ್ನತ ಮೂಲಗಳು ತಿಳಿಸಿವೆ.

ಏಪ್ರಿಲ್ 15ರಂದು ಮುಖ್ಯಮಂತ್ರಿ ಮತ್ತು ಇಬ್ಬರು ಉಪಮುಖ್ಯಮಂತ್ರಿಗಳಷ್ಟೆ ಪ್ರಮಾಣವಚನ ಸ್ವೀಕರಿಸಿದ್ದರು. ಬಿಜೆಪಿಯ ಪ್ರಮುಖ ನಾಯಕರು ಪಂಚರಾಜ್ಯಗಳ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದ ಕಾರಣ ಸಚಿವರ ಪ್ರಮಾಣವಚನ ಸಮಾರಂಭವನ್ನು ಫಲಿತಾಂಶ ಘೋಷಣೆ ಬಳಿಕ ಆಯೋಜಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.