ಪಟ್ನಾ: ಜೆಡಿಯು ನಾಯಕ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು
ಅವರಿಗೆ ನೆಗೆಟಿವ್ ಫಲಿತಾಂಶ ಬಂದಿದೆ ಎಂದು ಏಮ್ಸ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಬಿಹಾರ ವಿಧಾನ ಪರಿಷತ್ ಸಭಾಪತಿ ಅವಧೇಶ್ ನಾರಾಯಣ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿತ್ತು. ಇವರ
ಜೊತೆಗೂಡಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಈ ಹಿನ್ನೆಲೆಯಲ್ಲಿ ನಿತೀಶ್
ಕುಮಾರ್ ಅವರು ಕೋವಿಡ್–19 ಪರೀಕ್ಷೆಗೆ ಬಳಗಾಗಿದ್ದರು.

ಸಭಾಪತಿ ಮತ್ತು ಮುಖ್ಯಮಂತ್ರಿಗಳು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಲ್ಲಾ 14 ಅಧಿಕಾರಿಗಳುಹಾಗೂ
ಕಚೇರಿ ಸಿಬ್ಬಂದಿಗಳಿಗೂ ಕೊರೊನಾ ವೈರಸ್ ಪರೀಕ್ಷೆ ನಡೆಸಲಾಗಿದ್ದು ಅವರಿಗೂ ನೆಗೆಟಿವ್ ಫಲಿತಾಂಶ ಬಂದಿದೆಎಂದು ಏಮ್ಸ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ನಿತೀಶ್ ಕುಮಾರ್ ಪಕ್ಕದಲ್ಲಿ ಕುಳಿತಿದ್ದ ಸಭಾಧ್ಯಕ್ಷ ವಿಜಯ್ ಕುಮಾರ್ ಚೌಧರಿ ಹಾಗೂ ಉಪ ಮುಖ್ಯಮಂತ್ರಿ ಸುಶೀಲ್
ಕುಮಾರ್ ಮೋದಿ ಅವರನ್ನು ಕೊರೊನಾ ವೈರಸ್ ಪರೀಕ್ಷೆಗೆ ಒಳಪಡಿಸಲಾಗಿದ್ದು ಅವರ ವರದಿಯ ಫಲಿತಾಂಶ ಬರಬೇಕಿದೆ
ಎಂದು ವೈದ್ಯರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಕಚೇರಿಗೆ ಭೇಟಿ ನೀಡುವ ಅಧಿಕಾರಿಗಳು ಹಾಗೂ ಗಣ್ಯರನ್ನು ಸ್ಕ್ರೀನಿಂಗ್‌ಗೆ ಗುರಿಪಡಿಸಲಾಗುವುದು ಎಂದು ಸಿಎಂ
ಕಚೇರಿ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.