ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಭೇಟಿಯಾದ ನಿತೀಶ್ ಕುಮಾರ್, ತೇಜಸ್ವಿ ಯಾದವ್

Published 21 ಮೇ 2023, 7:31 IST
Last Updated 21 ಮೇ 2023, 7:31 IST
ಅಕ್ಷರ ಗಾತ್ರ

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಡಿಸಿಎಂ ತೇಜಸ್ವಿ ಯಾದವ್ ಅವರು ದೆಹಲಿಯಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಇಂದು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ವಿರೋಧ ಪಕ್ಷಗಳನ್ನು ಒಟ್ಟುಗೂಡಿಸು ಪ್ರಯತ್ನಗಳ ಭಾಗವಾಗಿ ನಿತೀಶ್ ಅವರು ಕೇಜ್ರಿವಾಲ್ ಅವರನ್ನು ಭೇಟಿಯಾಗಿದ್ದಾರೆ ಎಂದು ವರದಿಯಾಗಿದೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್, ‘ನಾನು ಇಂದು ನಿತೀಶ್ ಜೀ ಅವರೊಂದಿಗೆ ಸಭೆ ನಡೆಸಿದ್ದೇನೆ. ದೆಹಲಿ ಪರವಾಗಿ ಕೇಂದ್ರವು ಸುಪ್ರೀಂಕೋರ್ಟ್ ಆದೇಶವನ್ನು ನಿರಾಕರಿಸುವ ಸುಗ್ರೀವಾಜ್ಞೆಯನ್ನು ತರುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ನಾನು ದೆಹಲಿಯ ಜನರೊಂದಿಗೆ ನಿಲ್ಲುತ್ತೇನೆ’ ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.

ಒಂದು ವೇಳೆ ಕೇಂದ್ರ ಸರ್ಕಾರ ಈ ಸುಗ್ರೀವಾಜ್ಞೆಯನ್ನು ಮಸೂದೆಯಾಗಿ ತಂದರೆ, ಬಿಜೆಪಿಯೇತರ ಪಕ್ಷಗಳೆಲ್ಲ ಒಗ್ಗೂಡಿದರೆ ರಾಜ್ಯಸಭೆಯಲ್ಲಿ ಬಿಜೆಪಿಗೆ ಹಿನ್ನಡೆ ಉಂಟು ಮಾಡುಬಹುದು. ಅಂತಹದ್ದೇನಾದರೂ ನಡೆದರೆ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬಹುದು ಎಂಬ ಸಂದೇಶ ರವಾನಿಸಬಹುದು ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಶನಿವಾರ ಪ್ರಮಾಣವಚನ ಸ್ವೀಕರಿಸಿದರು. ಈ ಸಮಾರಂಭದಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಸೇರಿದಂತೆ ಬಿಜೆಪಿಯೇತರ ಕೆಲವು ನಾಯಕರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT