ನವದೆಹಲಿ: ಜೆಡಿಯು ರಾಷ್ಟ್ರೀಯ ಅಧ್ಯಕ್ಷ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂದು (ಶುಕ್ರವಾರ) ರಾಜ್ಯಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಮಾರ್ಚ್ 16ರಂದು ರಾಜ್ಯಸಭೆಗೆ ಆಯ್ಕೆಯಾಗಿದ್ದ ನಿತೀಶ್ ಕುಮಾರ್ ಅವರು ಮಾರ್ಚ್ 30ರಂದು ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ನಿತೀಶ್ ಅವರು ರಾಜ್ಯಸಭೆಗೆ ಆಯ್ಕೆಯಾಗಿರುವುದರಿಂದ ಬಿಹಾರ ಮುಖ್ಯಮಂತ್ರಿ ಹುದ್ದೆಯಿಂದ ನಿರ್ಗಮಿಸಲು ಕ್ಷಣಗಣನೆ ಆರಂಭವಾಗಿದೆ.

ನಿತೀಶ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಹೊಸ ಸಚಿವ ಸಂಪುಟ ರಚನೆಯ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಬಿಹಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಂಜಯ್ ಸರೋಗಿ ಹೇಳಿದ್ದಾರೆ.

ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ನಿತೀಶ್ ಕುಮಾರ್ ಸೇರಿದಂತೆ ಎನ್ಡಿಎ ಮೈತ್ರಿಕೂಟದ ಎಲ್ಲರೂ ಒಗ್ಗಟ್ಟಾಗಿ ಈ ಕುರಿತು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.