ನವದೆಹಲಿ: ಈ ವರ್ಷದ ಅಂತ್ಯದಲ್ಲಿ ನಡೆಯುವ ಬಿಹಾರ ವಿಧಾನಸಭೆ ಚುನಾವಣೆಯ ವೇಳೆ ವರ್ಚುವಲ್ ಜೊತೆಗೆ ಬಹಿರಂಗ ಪ್ರಚಾರಕ್ಕೂ ಅವಕಾಶ ಸಿಗುವ ಸಾಧ್ಯತೆ ಇದೆ.

ಚುನಾವಣಾ ಆಯೋಗವು ಕೋವಿಡ್ ಕಾಲದಲ್ಲಿ ಹೊಸ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸಲು ಚಿಂತಿಸಿದೆ ಎಂದು ಆಯೋಗದ ಸದಸ್ಯರೊಬ್ಬರು ತಿಳಿಸಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿಬಹಿರಂಗ ಪ್ರಚಾರ ಆಯೋಜಿಸಲು ರಾಜಕೀಯ ಪಕ್ಷಗಳಿಗೆ ಕೆಲ ಷರತ್ತುಗಳನ್ನು ವಿಧಿಸುವ ಸಾಧ್ಯತೆ ಇದೆ.

ನಾಮಪತ್ರ ಸಲ್ಲಿಕೆಯ ವೇಳೆ ಅಭ್ಯರ್ಥಿಯ ಜೊತೆಗೆ ಇಬ್ಬರಿಗೆ ಮಾತ್ರ ಅವಕಾಶ ನೀಡುವ ಬಗ್ಗೆಯೂ ಚುನಾವಣಾ ಆಯೋಗ ಚರ್ಚೆ ನಡೆಸುತ್ತಿದೆ. ಆನ್‌ಲೈನ್ ಮೂಲಕ ನಾಮಪತ್ರ ಸಲ್ಲಿಸುವ ವ್ಯವಸ್ಥೆಗೂ ಚಾಲನೆ ನೀಡುವ ಸಾಧ್ಯತೆ ಇದೆ. ಮನೆ ಮನೆ ಪ್ರಚಾರದ ವೇಳೆ ಮೂರಕ್ಕಿಂತ ಹೆಚ್ಚು ಮಂದಿಗೆ ಅವಕಾಶ ನೀಡದಿರುವ ಬಗ್ಗೆಯೂ ಚಿಂತಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.