ಪಟ್ನಾ: ಬಿಹಾರ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಗೆ ಕ್ಷಣಗಣನೆ ಆರಂಭವಾಗಿರುವ ಹೊತ್ತಿನಲ್ಲಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ಪಟ್ನಾ ಮೆಟ್ರೊ ರೈಲು ಯೋಜನೆಯ ಮೊದಲ ಹಂತಕ್ಕೆ ಇಂದು (ಸೋಮವಾರ) ಚಾಲನೆ ನೀಡಿದ್ದಾರೆ.

ಅಂತರರಾಜ್ಯ ಬಸ್ ಟರ್ಮಿನಲ್ನಿಂದ (ಐಎಸ್ಬಿಟಿ) ಭೂತನಾಥ್ ನಿಲ್ದಾಣವರೆಗಿನ 3.6 ಕಿ.ಮೀ. ಉದ್ದದ ನೀಲಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿದ್ದಾರೆ.

ಇದಕ್ಕೂ ಮುನ್ನ ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಜೈಸ್ವಾಲ್ ಅವರು, ಈ ಯೋಜನೆಯಿಂದ ಜನರಿಗೆ ಸಂಚಾರ ದಟ್ಟಣೆಯಿಂದ ಮುಕ್ತಿ ಸಿಗಲಿದೆ ಎಂದು ಮೆಚ್ಚುಗೆ ವ್ಯಕ್ತಪಿಸಿದ್ದಾರೆ.
.ಇಂದು ಬಿಹಾರ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ: ಆಯೋಗ.ಬಿಹಾರ ಚುನಾವಣೆ: ತೇಜಸ್ವಿ ಮನೆಯಲ್ಲಿ ಇಂಡಿಯಾ ಸಭೆ; ಶೀಘ್ರವೇ ಸೀಟು ಹಂಚಿಕೆ ಪ್ರಕಟ.
ಮಾಧ್ಯಮಗಳ ವರದಿ ಪ್ರಕಾರ, ಅಂದಾಜು ₹ 13,365 ಕೋಟಿ ವೆಚ್ಚದ ಪಟ್ನಾ ಮೆಟ್ರೊ ರೈಲು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು 2019ರಲ್ಲಿ ಶಂಕುಸ್ಥಾಪನೆ ನೆರವೇರಿಸಿದ್ದರು.

ಇಂದು ವೇಳಾಪಟ್ಟಿ ಪ್ರಕಟ
ಬಿಹಾರದಲ್ಲಿ ಚುನಾವಣಾ ಸಿದ್ಧತೆ ಪರಿಶೀಲನೆ ಸಲುವಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನೇತೃತ್ವದ ತಂಡ, ಕೈಗೊಂಡಿದ್ದ ಎರಡು ದಿನಗಳ ಭೇಟಿ ಭಾನುವಾರವಷ್ಟೇ ಮುಕ್ತಾಯವಾಗಿದೆ. ಬಳಿಕ ಪತ್ರಿಕಾಗೋಷ್ಟಿ ನಡೆಸಿದ್ದ ಅವರು, ಪ್ರಸ್ತುತ ಸರ್ಕಾರದ ಅವಧಿ ಮುಕ್ತಾಯವಾಗುವ ವೇಳೆಗೆ (ನವೆಂಬರ್ 22ರೊಳಗೆ) ವಿಧಾನಸಭಾ ಚುನಾವಣಾ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ ಎಂದು ತಿಳಿಸಿದ್ದಾರೆ.

ಇಂದು ಸಂಜೆ ವೇಳಾಪಟ್ಟಿ ಪ್ರಕಟಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ. ಹೀಗಾಗಿ, ರಾಜ್ಯದಲ್ಲಿ ರಾಜಕೀಯ ಬೆಳವಣಿಗೆಗಳು ಬಿರುಸು ಪಡೆದುಕೊಂಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.