ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆಗಳು ಈಗಾಗಲೇ ಹೊರಬಿದ್ದಿದ್ದು, ಎಲ್ಲ ಸಮೀಕ್ಷೆಗಳೂ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ (ಎನ್ಡಿಎ) ಬಹುಮತ ನೀಡಿವೆ. ‘ಇಂಡಿಯಾ’ ಮೈತ್ರಿಕೂಟವು ಬಹುಮತದಿಂದ ದೂರವೇ ಇರಲಿದೆ ಎಂದೂ ಹೇಳಿವೆ.

ಹೊಸದಾಗಿ ಬಿಹಾರ ರಾಜಕಾರಣಕ್ಕೆ ಪ್ರವೇಶ ಪಡೆದಿದ್ದ, ಪ್ರಶಾಂತ್ ಕಿಶೋರ್ ಅವರ ಜನ ಸುರಾಜ್ ಪಕ್ಷವು ಖಾತೆ ತೆರೆಯಲಿದೆಯೇ ಹೊರತು ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆ ಕಡಿಮೆ ಎಂದು ಮತಗಟ್ಟೆ ಸಮೀಕ್ಷೆಗಳು ಭವಿಷ್ಯ ನುಡಿದಿವೆ.

ಮ್ಯಾಟ್ರಿಜ್ ಸಮೀಕ್ಷೆಯ ಪ್ರಕಾರ ನಿತೀಶ್ ಕುಮಾರ್ ನೇತೃತ್ವದ ಎನ್ಡಿಎ ಒಟ್ಟು 243 ಸ್ಥಾನಗಳಲ್ಲಿ 146-167 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ಆದರೆ, ‘ಇಂಡಿಯಾ’ ಬಣ (ಮಹಾಘಟಬಂಧನ್) ಸುಮಾರು 70ರಿಂದ 90 ಸ್ಥಾನಗಳನ್ನು ಪಡೆಯಲಿದೆ ಎಂದು ಭವಿಷ್ಯ ನುಡಿದಿದೆ.

ಜೆವಿಸಿ ಪೋಲ್ಸ್ ಸಮೀಕ್ಷೆ ಪ್ರಕಾರ ಎನ್ಡಿಎ 135–150 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ. ‘ಇಂಡಿಯಾ’ ಬಣ 88–103 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬಹುದು ಎಂದು ಹೇಳಿದೆ. ಅದೇ ರೀತಿ ಪಿ–ಮಾರ್ಕ್, ದೈನಿಕ್ ಭಾಸ್ಕರ್, ಪೀಪಲ್ಸ್ ಇನ್ಸೈಟ್, ಪೋಲ್ಸ್ಟಾರ್, ಪೀಪಲ್ಸ್ ಪ್ಲಸ್ ಸಮೀಕ್ಷೆಗಳೂ ಎನ್ಡಿಎಗೆ ಬಹುಮತ ಸಿಗಲಿದೆ ಎಂದು ಅಂದಾಜಿಸಿವೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ 2020 ಮತ್ತು 2015ರ ವಿಧಾನಸಭಾ ಚುನಾವಣೆಯ ವೇಳೆ ಮತಗಟ್ಟೆ ಸಮೀಕ್ಷೆಗಳು ಏನು ಭವಿಷ್ಯ ನುಡಿದಿದ್ದವು ಮತ್ತು ಫಲಿತಾಂಶ ಏನಾಗಿತ್ತು ಎಂಬುದನ್ನು ನೋಡೋಣ.

2020...

2020ರ ವಿಧಾನಸಭಾ ಚುನಾವಣೆಯು ಸಮೀಕ್ಷೆದಾರರಿಗೆ ಆಘಾತ ನೀಡಿದ ವರ್ಷವಾಗಿತ್ತು. ಮತಗಟ್ಟೆ ಸಮೀಕ್ಷೆಗಳು ಹೆಚ್ಚಾಗಿ ಆರ್ಜೆಡಿ ನೇತೃತ್ವದ ಮಹಾಘಟಬಂಧನ್ ಪರವಾಗಿ ಭವಿಷ್ಯ ನುಡಿದಿದ್ದವು. ಟೈಮ್ಸ್ ನೌ ಸಿ-ವೋಟರ್ ಸಮೀಕ್ಷೆ ಪ್ರಕಾರ ಒಟ್ಟು 243 ಸ್ಥಾನಗಳ ಪೈಕಿ ಆರ್ಜೆಡಿ ನೇತೃತ್ವದ ವಿರೋಧ ಪಕ್ಷಗಳ ಬಣ 120 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಹೇಳಿತ್ತು. ಇದೇ ವೇಳೆ ಎನ್ಡಿಎ 116 ಸ್ಥಾನಗಳಿಗೆ ಸೀಮಿತವಾಗಲಿದೆ ಎಂದು ಭವಿಷ್ಯ ನುಡಿದಿತ್ತು. ಇಂಡಿಯಾ ಟುಡೇ-ಮೈ ಆಕ್ಸಿಸ್ ಸಮೀಕ್ಷೆ ಪ್ರಕಾರ ಮಹಾಘಟಬಂಧನ್ 150 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಹೇಳಿತ್ತು. ಹಾಗೆಯೇ ಎನ್ಡಿಎ ಕೇವಲ 80 ಸ್ಥಾನಗಳನ್ನು ಪಡೆಯಲಿದೆ ಎಂದು ಭವಿಷ್ಯ ನುಡಿದಿತ್ತು.

ಆದಾಗ್ಯೂ, ಫಲಿತಾಂಶ ಹೊರಬಿದ್ದಾಗ ಮತಗಟ್ಟೆ ಸಮೀಕ್ಷೆಗಳ ಭವಿಷ್ಯ ಹುಸಿಯಾಗಿತ್ತು. 243 ಸ್ಥಾನಗಳ ಪೈಕಿ ಎನ್ಡಿಎ 125ರಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರದ ಗದ್ದುಗೆ ಏರಿತ್ತು. ಮಹಾಘಟಬಂಧನ್ 110 ಸ್ಥಾನಗಳನ್ನು ಗಳಿಸಲಷ್ಟೇ ಶಕ್ತವಾಗಿತ್ತು.

2020ರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ 17 ಸ್ಥಾನಗಳನ್ನು ಕಳೆದುಕೊಳ್ಳುವ ಸಾಧ್ಯತೆಯಿದ್ದು, ಮಹಾಘಟಬಂಧನ್ 15 ಸ್ಥಾನಗಳನ್ನು ಹೆಚ್ಚಾಗಿ ಪಡೆದುಕೊಳ್ಳಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ಅಂದಾಜು ಮಾಡಿದ್ದವು.

2015...

2015ರ ವಿಧಾನಸಭಾ ಚುನಾವಣೆಯಲ್ಲಿ 243 ಸ್ಥಾನಗಳ ಪೈಕಿ ಮಹಾಘಟಬಂಧನ್ 122 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಹುಮತ ಗಳಿಸಲಿದೆ ಎಂದು ಮೂರು ಸಮೀಕ್ಷೆಗಳು ಭವಿಷ್ಯ ನುಡಿದಿದ್ದರೆ, ಮತ್ತೆರಡು ಸಮೀಕ್ಷೆಗಳು ಎನ್ಡಿಎ ಮುನ್ನಡೆ ಸಾಧಿಸಲಿದೆ ಎಂದು ಹೇಳಿದ್ದವು. ಮತ್ತೊಂದು ಸಮೀಕ್ಷೆ ಅತಂತ್ರ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಭವಿಷ್ಯ ನುಡಿದಿತ್ತು.

ಆದಾಗ್ಯೂ, ಫಲಿತಾಂಶವು ಸಮೀಕ್ಷೆಗಳಿಗಿಂತ ಭಿನ್ನವಾಗಿತ್ತು. ಮಹಾಘಟಬಂಧನ್ 178 ಸ್ಥಾನಗಳನ್ನು ಗೆದ್ದರೆ, ಎನ್ಡಿಎ ಕೇವಲ 58 ಸ್ಥಾನಗಳನ್ನು ಗಳಿಸಿತ್ತು. ಇದು ಮತ್ತೊಮ್ಮೆ ಚುನಾವಣೋತ್ತರ ಸಮೀಕ್ಷೆಗಳನ್ನು ಹುಸಿಯಾಗುವಂತೆ ಮಾಡಿತ್ತು.

ಎಲ್ಲರ ಚಿತ್ತ 14ರತ್ತ

ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನ ಮಂಗಳವಾರ ಪೂರ್ಣಗೊಂಡಿದೆ. ಎರಡನೇ ಮತ್ತು ಕೊನೆಯ ಹಂತದಲ್ಲಿ 122 ಕ್ಷೇತ್ರಗಳಿಗೆ ನಡೆದ ಮತದಾನದಲ್ಲಿ ದಾಖಲೆ ಪ್ರಮಾಣದ ಶೇ 68.79ರಷ್ಟು ಮಂದಿ ಹಕ್ಕು ಚಲಾಯಿಸಿದ್ದಾರೆ.

ಬಿಹಾರದ ಎಲ್ಲ 243 ಕ್ಷೇತ್ರಗಳ ಅಭ್ಯರ್ಥಿಗಳ ಹಣೆ ಬರಹ ವಿದ್ಯುನ್ಮಾನ ಮತಯಂತ್ರಗಳಲ್ಲಿ (ಇವಿಎಂ) ಅಡಕವಾಗಿದ್ದು, ಮುಂದಿನ ಐದು ವರ್ಷಗಳ ಅಧಿಕಾರ ಯಾರ ಪಾಲಾಗಲಿದೆ ಎಂಬುದು ನವೆಂಬರ್ 14ರ ಮತ ಎಣಿಕೆ ದಿನ ಗೊತ್ತಾಗಲಿದೆ. ಹೀಗಾಗಿ ಎಲ್ಲರ ದೃಷ್ಟಿ ನ. 14ರ ಫಲಿತಾಂಶದ ಮೇಲೆ ನೆಟ್ಟಿದೆ.

ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ (ಎಸ್ಐಆರ್) ಬಳಿಕ ರಾಜ್ಯದಲ್ಲಿ ನಡೆದ ಮೊದಲ ಸಾರ್ವತ್ರಿಕ ಚುನಾವಣೆ ಇದಾಗಿದೆ. ನ. 6ರಂದು ಮೊದಲ ಹಂತದಲ್ಲಿ 121 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಆಗ ಶೇ 65.1ರಷ್ಟು ಜನರು ಮತ ಚಲಾಯಿಸಿದ್ದರು.

ನ.11ರಂದು ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಡೆದಿದ್ದು, ದಾಖಲೆ ಪ್ರಮಾಣದ ಶೇ 68.79ರಷ್ಟು ಮಂದಿ ಹಕ್ಕು ಚಲಾಯಿಸಿದ್ದಾರೆ. ಎರಡೂ ಹಂತಗಳಲ್ಲಿ ರಾಜ್ಯದಲ್ಲಿ ಒಟ್ಟಾರೆ ಶೇ 66.90ರಷ್ಟು ಮತದಾನ ದಾಖಲಾಗಿದ್ದು, ಕಳೆದ ವಿಧಾನಸಭಾ ಚುನಾವಣೆಗಿಂತ ಶೇ 9.6ರಷ್ಟು ಏರಿಕೆಯಾಗಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ವಿನೋದ್ ಸಿಂಗ್ ತಿಳಿಸಿದ್ದರು.

2020ರ ಚುನಾವಣೆಯಲ್ಲಿ ರಾಜ್ಯದಲ್ಲಿ ಶೇ 57.29ರಷ್ಟು ಮತದಾನವಾಗಿತ್ತು.
.Bihar Elections: ಬಿಹಾರ ಇತಿಹಾಸದಲ್ಲೇ ದಾಖಲೆ ಪ್ರಮಾಣದ ಶೇ 66.91ರಷ್ಟು ಮತದಾನ.Bihar Exit Poll: ಎನ್ಡಿಎಗೆ ಅಧಿಕಾರ; 'ಇಂಡಿಯಾ' ಕೂಟ ಬಹುಮತದಿಂದ ದೂರ.Bihar Exit Poll: ಎನ್ಡಿಎಗೆ ಬಹುಮತ ಎಂದ ಹಲವು ಮತಗಟ್ಟೆ ಸಮೀಕ್ಷೆಗಳು.Bihar Elections: ಬಿಹಾರದಲ್ಲಿ ಮಹಾಘಟಬಂಧನ ಸರ್ಕಾರ ರಚನೆ ಖಚಿತ: ಕಾಂಗ್ರೆಸ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.