ಪಟ್ನಾ: ಬಿಹಾರದಲ್ಲಿ ನಡೆದ ವಿಧಾನಸಭಾ ಚುನಾವಣೆಯ ಎರಡನೇ ಹಂತದಲ್ಲಿ ದಾಖಲೆಯ ಶೇ 67.14ರಷ್ಟು ಮತದಾನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡನೇ ಹಂತದಲ್ಲಿ 122 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾರರು ಉತ್ಸಾಹದಿಂದ ಬಂದು ಮತ ಚಲಾಯಿಸಿದ್ದಾರೆ. ಈ ಕ್ಷೇತ್ರಗಳಲ್ಲಿ ಒಟ್ಟು 3.70 ಕೋಟಿ ಮತದಾರರಿದ್ದರು.

ಈ ಮೂಲಕ 243 ವಿಧಾನಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ನಡೆದ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದೆ. ನ.14ರಂದು ಮತ ಎಣಿಕೆ ನಡೆಯಲಿದೆ.

ಮೊದಲ ಹಂತದಲ್ಲಿ ನ.06 ರಂದು 121 ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಶೇ 65.09ರಷ್ಟು ಮತದಾನವಾಗಿತ್ತು. ಈ ಕ್ಷೇತ್ರಗಳಲ್ಲಿ 3.75 ಕೋಟಿ ಮತದಾರರಿದ್ದರು.
.ಬಿಹಾರ ಚುನಾವಣೆ: 2ನೇ ಹಂತದ ಮತದಾನ ಇಂದು; 1,302 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ.Bihar Polls: ಮತದಾನ ಮಾಡಿದ ಫೋಟೊ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೆ: FIR ದಾಖಲು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.