ಪಟ್ನಾ: ವಿರೋಧ ಪಕ್ಷಗಳ ಒಕ್ಕೂಟ ‘ಇಂಡಿಯಾ’ ಬಣವು ಗುರುವಾರ ಆರ್ಜೆಡಿ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಬಿಹಾರ ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದೆ.

ಒಕ್ಕೂಟದ ಎಲ್ಲ ಪಕ್ಷಗಳ ಸದಸ್ಯರು ಭಾಗವಹಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಘೋಷಣೆ ಮಾಡಿದ ಕಾಂಗ್ರೆಸ್ನ ಹಿರಿಯ ನಾಯಕ ಅಶೋಕ್ ಗೆಹಲೋತ್, ಈ ನಿರ್ಧಾರವನ್ನು ತಮ್ಮ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಬಲಿಸಿದ್ದಾರೆ ಎಂದು ಪ್ರತಿಪಾದಿಸಿದರು.

‘ಇಂಡಿಯಾ’ ಬಣವು ಸರ್ಕಾರ ರಚಿಸಿದರೆ ವಿಕಾಸಶೀಲ ಇನ್ಸಾನ್ ಪಕ್ಷದ(ವಿಐಪಿ) ಮುಖ್ಯಸ್ಥ ಮುಖೇಶ್ ಸಾಹ್ನಿ ಉಪಮುಖ್ಯಮಂತ್ರಿ ಹುದ್ದೆಗೆ ಏರಲಿದ್ದಾರೆ. ಅದೇ ರೀತಿ ಹಿಂದುಳಿದ ವರ್ಗಗಳ ಮತ್ತೊಬ್ಬ ನಾಯಕನಿಗೆ ಉಪಮುಖ್ಯಮಂತ್ರಿ ಹುದ್ದೆ ಸಿಗಲಿದೆ ಎಂದು ಹೇಳಿದ್ದಾರೆ.

ಬಿಹಾರದಲ್ಲಿ ನ.6 ಮತ್ತು 11ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ನ.14ರಂದು ಮತ ಎಣಿಕೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.