ನವದೆಹಲಿ: ಬಿಹಾರದಲ್ಲಿ ನಡೆದ ಕಳೆದ ಐದು ವಿಧಾನಸಭೆ ಚುನಾವಣೆಗಳಲ್ಲಿನ ಮತದಾನ ಪ್ರಮಾಣವನ್ನು ಅವಲೋಕಿಸಿದರೆ, ಪುರುಷರಿಗಿಂತ ಮಹಿಳೆಯರೇ ಹಕ್ಕು ಚಲಾವಣೆಯಲ್ಲಿ ಮುಂದೆ ಇರುವುದು ಚುನಾವಣಾ ಆಯೋಗದ ದತ್ತಾಂಶದಿಂದ ತಿಳಿದುಬರುತ್ತದೆ.

ಪ್ರಮುಖ ಅಂಶಗಳು

ಪ್ರಧಾನಿ ನರೇಂದ್ರ ಮೋದಿ ಅವರು ‘ಮುಖ್ಯಮಂತ್ರಿ ಮಹಿಳಾ ರೋಜಗಾರ ಯೋಜನೆ’ಯಡಿ ಸ್ವ ಉದ್ಯೋಗ ಕೈಗೊಳ್ಳುವುದಕ್ಕೆ ಪ್ರತಿ ಅರ್ಹ ಮಹಿಳೆಗೆ ₹10 ಸಾವಿರ ನೀಡುವುದಾಗಿ ಘೋಷಿಸಿದರು. ಯೋಜನೆಯಡಿ 75 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಸೆಪ್ಟೆಂಬರ್ನಲ್ಲಿ ಈ ಹಣವನ್ನು ವರ್ಗಾವಣೆ ಮಾಡಲಾಯಿತು. ಇದು ಮಹಿಳೆಯರ ಮತಪ್ರಮಾಣ ಹೆಚ್ಚಾಗಲು ಪ್ರಮುಖ ಕಾರಣಗಳಲ್ಲೊಂದು.

ಏಳು ಜಿಲ್ಲೆಗಳಲ್ಲಿ ಪುರುಷರಿಗಿಂತ ಮಹಿಳೆಯರ ಮತಪ್ರಮಾಣ ಶೇ14ಕ್ಕಿಂತ ಹೆಚ್ಚು ಇದೆ. 10 ಜಿಲ್ಲೆಗಳಲ್ಲಿ ಈ ಅಂತರವು ಶೇ10ಕ್ಕೂ ಅಧಿಕ

ಪಟ್ನಾ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಮಹಿಳೆಯರಿಗಿಂತ ಪುರುಷರೇ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ

2005ರಲ್ಲಿ ನಿತೀಶ್ ಕುಮಾರ್ ಗೆದ್ದು ಮೊದಲ ಬಾರಿಗೆ ಮುಖ್ಯಮಂತ್ರಿಯಾದರು. ಈ ಚುನಾವಣೆಯನ್ನು ಹೊರತುಪಡಿಸಿ ಉಳಿದೆಲ್ಲಾ ಚುನಾವಣೆಗಳಲ್ಲಿ ಮಹಿಳೆಯರೇ ಹೆಚ್ಚು ಪ್ರಮಾಣದಲ್ಲಿ ಮತ ಚಲಾಯಿಸಿದ್ದಾರೆ

ನಿತೀಶ್ ಕುಮಾರ್ ಮದ್ಯ ಮಾರಾಟ ನಿಷೇಧಿಸಿದರು. ಜೀವಿಕಾ ದೀದಿ ಯೋಜನಾ ಜಾರಿಗೊಳಿಸಿದರು. ಇಂತಹ ಅನೇಕ ಕಾರ್ಯಕ್ರಮಗಳು ಮಹಿಳೆಯರ ಬೆಂಬಲ ಗಿಟ್ಟಿಸುವಲ್ಲಿ ಯಶಸ್ಸು ತಂದುಕೊಟ್ಟಿವೆ

.ಬಿಹಾರ: NDA ಮೈತ್ರಿಕೂಟಕ್ಕೆ ಪ್ರಚಂಡ ಜಯ; 'ನಿಮೋ' ಸುನಾಮಿ – ಮಹಾಮೈತ್ರಿ ಧೂಳೀಪಟ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.