ಪಟ್ನಾ: ಬಿಹಾರದ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನೇತೃತ್ವದ ಜನತಾದಳ (ಯುನೈಟೆಡ್) ಪಕ್ಷ ಅಂತಿಮಗೊಳಿಸಿದ್ದು, ನಾಲ್ವರು ಹಾಲಿ ಶಾಸಕರಿಗೆ ಟಿಕೆಟ್ ನೀಡದಿರಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಕುರಿತು ಜೆಡಿ(ಯು) ಪಕ್ಷದ ಹಿರಿಯ ನಾಯಕರೊಬ್ಬರು ಇಂದು (ಭಾನುವಾರ) ಮಾಹಿತಿ ನೀಡಿದ್ದಾರೆ.

243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಎನ್ಡಿಎ ಮೈತ್ರಿಯ ಭಾಗವಾಗಿರುವ ಜೆಡಿ(ಯು) 103 ಸ್ಥಾನಗಳಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ. ಈ ಕುರಿತು ಎನ್ಡಿಎ ಹಿರಿಯ ನಾಯಕರು ಔಪಚಾರಿಕ ಘೋಷಣೆ ಮಾಡಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಅಭ್ಯರ್ಥಿಗಳ ಆಯ್ಕೆ ಹಾಗೂ ಸ್ಪರ್ಧಿಸುವ ಕ್ಷೇತ್ರಗಳನ್ನು ಅಂತಿಮಗೊಳಿಸಲಾಗಿದೆ. ಉತ್ತಮ ಕೆಲಸ ಮಾಡದ ನಾಲ್ವರು ಹಾಲಿ ಶಾಸಕರನ್ನು ಕೈಬಿಡಲಾಗುವುದು ಎಂದು ಅವರು ಹೇಳಿದ್ದಾರೆ.

ಮೂಲಗಳ ಪ್ರಕಾರ ಬಿಜೆಪಿ 102 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.
.ಬಿಹಾರ ವಿಧಾನಸಭಾ ಚುನಾವಣೆ: ಎನ್ಡಿಎ ಸೀಟು ಹಂಚಿಕೆ ಸೂತ್ರ ಘೋಷಣೆ ಇಂದು.Bihar Elections: ಮೊದಲ ದಿನವೇ ಲಾಲು ಪ್ರಸಾದ್ ನಾಮಪತ್ರ ಸಲ್ಲಿಕೆ; ಇವರು ಅವರಲ್ಲ!.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.