ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 61 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.

ಮಹಾಘಟಬಂಧನದ ಮಿತ್ರ ಪಕ್ಷಗಳೊಂದಿಗೆ ಒಮ್ಮತ ಮೂಡದ ಕಾರಣ ಹಲವು ಕ್ಷೇತ್ರಗಳಲ್ಲಿ'ಇಂಡಿಯಾ' ಮೈತ್ರಿಕೂಟದ ಪಕ್ಷಗಳ ವಿರುದ್ಧವೇ ಸ್ಪರ್ಧಿಸಲು ನಿರ್ಧರಿಸಲಾಗಿದೆ.

ಈ ಬಾರಿ 61 ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದ್ದು, ಕಳೆದ ಬಾರಿಗಿಂತ ಒಂಬತ್ತು ಕಡಿಮೆಯಾಗಿದೆ.

ವೈಶಾಲಿ, ಲಾಲ್ಗಂಜ್, ಕಹಲ್ಗಾಂವ್, ರಾಜಪಾಕರ್ ಮತ್ತು ರೋಸೆರಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ಆರ್ಜೆಡಿ ಮಧ್ಯೆ ನೇರ ಹಣಾಹಣಿ ನಡೆಯುವ ಸಾಧ್ಯತೆ ಇದೆ. ಹಾಗೆಯೇ ಬಚ್ವಾಡದಲ್ಲಿ ಸಿಪಿಐ ಅಭ್ಯರ್ಥಿಯ ವಿರುದ್ಧ ಕಾಂಗ್ರೆಸ್ ಸ್ಪರ್ಧಿಸಲಿದೆ.

ಈ ಮುನ್ನ ಪ್ರಮುಖ ವಿರೋಧ ಪಕ್ಷವಾದ ಆರ್ಜೆಡಿ, ನಾಮಪತ್ರ ಸಲ್ಲಿಕೆಯ ಅವಧಿ ಮುಗಿಯಲು ಕೆಲವೇ ಗಂಟೆಗಳು ಇರುವಾಗ 143 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿತ್ತು.

ಸೀಟು ಹಂಚಿಕೆ ಸಂಬಂಧ ಕಾಂಗ್ರೆಸ್ ಹಾಗೂ ಆರ್ಜೆಡಿ ನಡುವೆ ಒಮ್ಮತ ಮೂಡಿಬಂದಿಲ್ಲ. ಇದು ಚುನಾವಣೆಯಲ್ಲಿ ವ್ಯತಿರಿಕ್ತ ಪರಿಣಾಮ ಬೀರುವ ಆತಂಕ ಕಾಡಿದೆ.

243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ನವೆಂಬರ್ 6 ಹಾಗೂ 11ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ನವೆಂಬರ್ 14ರಂದು ಮತ ಎಣಿಕೆ ನಡೆಯಲಿದೆ.
.Bihar Elections: 143 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಆರ್ಜೆಡಿ.ಕಾಂಗ್ರೆಸ್, ಆರ್ಜೆಡಿ ಸಂಚು ಆರೋಪ; ಬಿಹಾರ ಚುನಾವಣೆಯಿಂದ ಹಿಂದೆ ಸರಿದ ಜೆಎಂಎಂ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.