ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಗೆ 57 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಜನತಾ ದಳ (ಯುನೈಟೆಡ್) ಇಂದು (ಬುಧವಾರ) ಬಿಡುಗಡೆ ಮಾಡಿದೆ.

ಸೀಟು ಹಂಚಿಕೆ ಸಂಬಂಧ ಎನ್ಡಿಎ ಮೈತ್ರಿಯಲ್ಲಿ ಅಪಸ್ವರ ಎದ್ದಿರುವ ನಡುವೆ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿ(ಯು) ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.

ಎನ್ಡಿಎ ಮೈತ್ರಿಕೂಟದಲ್ಲಿ ಬಿಜೆಪಿ ಹಾಗೂ ಜೆಡಿಯು ತಲಾ 101 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ. ಉಳಿದ ಕ್ಷೇತ್ರಗಳನ್ನು ಮೈತ್ರಿಕೂಟದ ಇತರ ಪಕ್ಷಗಳಿಗೆ ಬಿಟ್ಟುಕೊಡಲಾಗಿದೆ.

ಎಲ್ಜೆಪಿ (ರಾಮ್ ವಿಲಾಸ್) 29, ಹಿಂದೂಸ್ತಾನಿ ಅವಾಮ್ ಮೋರ್ಚಾ (ಎಚ್ಎಎಂ) ಮತ್ತು ರಾಷ್ಟ್ರೀಯ ಲೋಕ ಮೋರ್ಚಾ (ಆರ್ಎಲ್ಎಂ) ಪಕ್ಷಗಳಿಗೆ ತಲಾ ಆರು ಸ್ಥಾನಗಳನ್ನು ನೀಡಲಾಗಿದೆ. ಆದರೆ ಸೀಟು ಹಂಚಿಕೆ ಬಗ್ಗೆ ಎಚ್ಎಎಂ ಹಾಗೂ ಆರ್ಎಲ್ಎಂ ಪಕ್ಷಗಳ ನಾಯಕರು ಈಗಾಗಲೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಹಾರ ವಿಧಾನಸಭೆ ಚುನಾವಣೆ ನವೆಂಬರ್ 6 ಹಾಗೂ 11ರಂದು ಎರಡು ಹಂತಗಳಲ್ಲಿ ನಡೆಯಲಿದೆ. ನವೆಂಬರ್ 14ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ.
.Bihar Elections | ಎನ್ಡಿಎ ಮೈತ್ರಿಯಲ್ಲಿ ಎಲ್ಲವೂ ಸರಿಯಿಲ್ಲ: ಕುಶ್ವಾಹ ಅಸಮಾಧಾನ.Bihar Elections | ಬಿಹಾರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಪ್ರಶಾಂತ್ ಕಿಶೋರ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.