‘ಸ್ನೇಹಿತರ’ ಅವಧಿಯಲ್ಲಿ ಭಾರತಕ್ಕೆ ಸಂಕಷ್ಟ: ಖರ್ಗೆ
ಪ್ರಧಾನಿ ನರೇಂದ್ರ ಮೋದಿ ಅವರು ‘ನನ್ನ ಸ್ನೇಹಿತ’ ಎಂದು ಹೆಮ್ಮೆಯಿಂದ ಹೇಳುವ ವ್ಯಕ್ತಿಗಳು ಭಾರತವನ್ನು ಹಲವು ಸಂಕಷ್ಟಗಳಿಗೆ ಸಿಲುಕಿಸಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದರು. ಭಾರತದ ಮೇಲೆ ಹೆಚ್ಚುವರಿ ಸುಂಕ ವಿಧಿಸಿ ಎಚ್1ಬಿ ವೀಸಾ ಶುಲ್ಕವನ್ನು ಅತಿಯಾಗಿ ಹೆಚ್ಚಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕ್ರಮಗಳನ್ನು ಉಲ್ಲೇಖಿಸಿ ಅವರು ಮಾತನಾಡಿದರು. ಈ ಸ್ನೇಹಿತರ ಅವಧಿಯಲ್ಲಿ ಭಾರತವು ಅಂತರರಾಷ್ಟ್ರೀಯ ಮಟ್ಟದಲ್ಲಿ ಮತ್ತು ರಾಷ್ಟ್ರ ಮಟ್ಟದಲ್ಲಿ ದೊಡ್ಡ ಸವಾಲು ಮತ್ತು ಸಂಕಷ್ಟಗಳನ್ನು ಎದುರಿಸಬೇಕಾಗಿದೆ ಎಂದು ಅವರು ಹೇಳಿದರು.