ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಲಿಸುತ್ತಿದ್ದ ಕಾರಿನಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

Published : 17 ಸೆಪ್ಟೆಂಬರ್ 2024, 14:23 IST
Last Updated : 17 ಸೆಪ್ಟೆಂಬರ್ 2024, 14:23 IST
ಫಾಲೋ ಮಾಡಿ
Comments

ಸಹರ್ಸ, ಬಿಹಾರ: ಚಲಿಸುತ್ತಿದ್ದ ಕಾರಿನಲ್ಲಿ ಬಾಲಕಿ ಮೇಲೆ ಮೂವರು ಪುರುಷರು ಲೈಂಗಿಕ ದೌರ್ಜನ್ಯ ನಡೆಸಿರುವ ಪ್ರಕರಣ ನಡೆದಿದೆ. ಸದಾರ್‌ ಪ್ರದೇಶದಲ್ಲಿ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

‘ಸೆಪ್ಟೆಂಬರ್‌ 14ರಂದು ಚಲಿಸುತ್ತಿದ್ದ ಕಾರಿನಲ್ಲಿ ಬಂದೂಕು ತೋರಿಸಿ ಬೆದರಿಸಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ’ ಎಂದು ಸಂತ್ರಸ್ತೆಯು ಸೋಮವಾರ ದೂರು ನೀಡಿದ್ದಳು. ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಯಿತು ಮತ್ತು ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸಲಾಯಿತು ಎಂದು ಸಹರ್ಸದ ಎಸ್‌ಪಿ ಹಿಮಾಂಶು ತಿಳಿಸಿದ್ದಾರೆ.

ಸಂತ್ರಸ್ತೆಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ. ವರದಿ ಇನ್ನಷ್ಟೇ ಬರಬೇಕಿದೆ. ಪ್ರಕರಣದ ತನಿಖೆಯನ್ನು ಎಲ್ಲಾ ಆಯಾಮಗಳಲ್ಲೂ ನಡೆಸಲಾಗುತ್ತಿದೆ. ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಶೋಧ ಕೈಗೊಳ್ಳಲಾಗಿದೆ. ದೌರ್ಜನ್ಯ ನಡೆದಿದೆ ಎನ್ನಲಾದ ಕಾರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT