ಪಟ್ನಾ: ‘ಮುಖ್ಯಮಂತ್ರಿ ಮಹಿಳಾ ರೋಜ್ಗಾರ್ ಯೋಜನೆ’ಯಡಿ 25 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ತಲಾ ₹10 ಸಾವಿರ ಜಮೆ ಮಾಡುವುದಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ಚಾಲನೆ ನೀಡಿದರು.

ಜೀವನೋಪಾಯ ಮತ್ತು ಸ್ವ–ಉದ್ಯೋಗದ ಮೂಲಕ ಮಹಿಳಾ ಸಬಲೀಕರಣವನ್ನು ಉತ್ತೇಜಿಸುವ ಧ್ಯೇಯದೊಂದಿಗೆ ಈ ಹಣವನ್ನು ಮಹಿಳೆಯರ ಖಾತೆಗೆ ವರ್ಗಾಯಿಸಲಾಗಿದೆ.

ಮುಖ್ಯಮಂತ್ರಿಯವರ ಗೃಹ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಒಟ್ಟು ₹2,500 ಕೋಟಿ ಮೊತ್ತವನ್ನು ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ಮಹಿಳೆಯರ ಖಾತೆಗೆ ಜಮೆ ಮಾಡಲಾಗಿದೆ.

ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್ಗಾರ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು 2025ರ ಸೆಪ್ಟೆಂಬರ್ನಲ್ಲಿ ಚಾಲನೆ ನೀಡಿದ್ದರು.

ಇದುವರೆಗೂ ಸುಮಾರು 1.81 ಕೋಟಿ ಮಹಿಳೆಯರು ತಲಾ ₹10 ಸಾವಿರ ಪಡೆದಿದ್ದಾರೆ. ಈ ಮೊತ್ತವನ್ನು ವ್ಯಾಪಾರ ಆರಂಭಿಸಲು ಬಳಸಿಕೊಂಡಿರುವ ಮಹಿಳೆಯರಿಗೆ ಶೀಘ್ರದಲ್ಲೇ ಮತ್ತೆ ₹2 ಲಕ್ಷ ಸಿಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ₹2 ಲಕ್ಷದವರೆಗೆ ಹೆಚ್ಚುವರಿ ಹಣಕಾಸು ನೆರವು ನೀಡುವ ಪ್ರಕ್ರಿಯೆಯನ್ನು ಬಿಹಾರ ಸರ್ಕಾರ ಆರಂಭಿಸಿದೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಈಚೆಗಷ್ಟೇ ಘೋಷಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.