ನವದೆಹಲಿ: ಬಿಹಾರದ ‘ಡಬಲ್ ಎಂಜಿನ್‘ ಬಿಜೆಪಿ ಸರ್ಕಾರ ಯುವಕರ ಮೇಲಿನ ದೌರ್ಜನ್ಯದ ಸಂಕೇತವಾಗಿದೆ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಪರೀಕ್ಷೆಗಳಲ್ಲಿ ಭ್ರಷ್ಟಚಾರ, ವಂಚನೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆಯಾಗದಂತೆ ತಡೆಯುವುದು ಸರ್ಕಾರದ ಕೆಲಸ. ಆದರೆ, ಭ್ರಷ್ಟಚಾರ ತಡೆಗಟ್ಟುವ ಬದಲು ವಿದ್ಯಾರ್ಥಿಗಳು ಧ್ವನಿ ಎತ್ತದಂತೆ ತಡೆಯಲಾಗುತ್ತಿದೆ’ ಎಂದು ಹೇಳಿದ್ದಾರೆ.

‘ಯುವಕರ ಮೇಲೆ ಜಲಫಿರಂಗಿ ಮತ್ತು ಲಾಠಿ ಪ್ರಹಾರ ನಡೆಸಿರುವುದು ಅಮಾನವೀಯವಾಗಿದೆ. ಬಿಜೆಪಿ ‘ಡಬಲ್ ಎಂಜಿನ್’ ಸರ್ಕಾರ ಯುವಕರ ಮೇಲಿನ ಡಬಲ್ ದೌರ್ಜನ್ಯದ ಸಂಕೇತವಾಗಿದೆ‘ ಎಂದು ಪ್ರಿಯಾಂಕಾ ಕಿಡಿಕಾರಿದ್ದಾರೆ.

ಡಿಸೆಂಬರ್ 13ರಂದು ನಡೆದ ಬಿಹಾರ ಲೋಕಸೇವಾ ಆಯೋಗದ (ಬಿಪಿಎಸ್ಸಿ) ಪರೀಕ್ಷೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಭಾನುವಾರ ಪಟ್ನಾದಲ್ಲಿ ಪ್ರತಿಭಟನೆ ನಡೆಸಿದವರ ಮೇಲೆ ಪೊಲೀಸರು ಜಲಫಿರಂಗಿ ಮತ್ತು ಲಾಠಿ ಪ್ರಹಾರ ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.