ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಹಾರದಲ್ಲಿ ಸೇತುವೆ ಕುಸಿತ ಪ್ರಕರಣಗಳು: 14 ಎಂಜಿನಿಯರ್‌ಗಳ ಅಮಾನತು

Published 5 ಜುಲೈ 2024, 13:06 IST
Last Updated 5 ಜುಲೈ 2024, 13:06 IST
ಅಕ್ಷರ ಗಾತ್ರ

ಪಟ್ನಾ: ಬಿಹಾರದಲ್ಲಿ ಕಳೆದ 15 ದಿನಗಳಿಂದ ನಿರಂತರವಾಗಿ ಸೇತುವೆ ಕುಸಿತ ಪ್ರಕರಣಗಳು ನಡೆಯುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ 14 ಎಂಜಿನಿಯರ್‌ಗಳನ್ನು ಸರ್ಕಾರ ಅಮಾನತು ಮಾಡಿರುವುದಾಗಿ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದಲ್ಲಿನ ಸೇತುವೆ ಕುಸಿತ ಪ್ರಕರಣಗಳು ರಾಷ್ಟ್ರವ್ಯಾಪಿ ಸುದ್ದಿಯಾಗಿದ್ದು, ಇದರಿಂದ ನಿತೀಶ್ ಕುಮಾರ್ ನೇತೃತ್ವದ ರಾಜ್ಯ ಸರ್ಕಾರ ತೀವ್ರ ಮುಜುಗರ ಅನುಭವಿಸಿತ್ತು.

ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಲ ಸಂಪನ್ಮೂಲ ಇಲಾಖೆ ನಡೆಸಿದ ತನಿಖೆಯ ವರದಿಯನ್ನು ಆಧರಿಸಿ ಅಮಾನತು ಕ್ರಮವನ್ನು ಸರ್ಕಾರ ಕೈಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

‘ನಿರ್ಲಕ್ಷ್ಯ ಹಾಗೂ ನಿರ್ವಹಣೆಯಲ್ಲಿನ ಲೋಪವೇ ಈ ಸೇತುವೆ ಕುಸಿತ ಪ್ರಕರಣಗಳಿಗೆ ಕಾರಣ. ಅಮಾನತುಗೊಂಡವರಲ್ಲಿ ಮೂವರು ಕಾರ್ಯನಿರ್ವಾಹಕ ಎಂಜಿನಿಯರ್‌ಗಳೂ ಇದ್ದಾರೆ’ ಎಂದು ತಿಳಿಸಿದ್ದಾರೆ.

ಬಿಹಾರದಲ್ಲಿ ಕಳೆದ 17 ದಿನಗಳಲ್ಲಿ 10 ಸೇತುವೆಗಳು ಕುಸಿದಿದ್ದವು. ಶಿವಾನ್, ಸರನ್, ಮಧುಬನಿ, ಅರಾರಿಯಾ, ಪೂರ್ವ ಚಂಪಾರಣ್ ಹಾಗೂ ಕಿಶನ್‌ಗಂಜ್‌ ಜಿಲ್ಲೆಯಲ್ಲಿನ ಸೇತುವೆಗಳು ಕುಸಿದಿದ್ದವು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT