ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ ಕಳ್ಳಬಟ್ಟಿ ದುರಂತ: 20 ಮಂದಿ ಬಂಧನ

Last Updated 16 ಏಪ್ರಿಲ್ 2023, 11:42 IST
ಅಕ್ಷರ ಗಾತ್ರ

ಮೋತಿಹಾರಿ/ ಪಟ್ನಾ (ಪಿಟಿಐ): ಬಿಹಾರದ‌ಲ್ಲಿ ಕಳ್ಳಬಟ್ಟಿ ಸಾರಾಯಿ ಕುಡಿದು ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೋತಿಹಾರಿಯ ವಿವಿಧೆಡೆ ಶೋಧಕಾರ್ಯ ನಡೆಸಿ 20 ಮಂದಿಯನ್ನು ಬಂಧಿಸಿ, ಅಪಾರ ಪ್ರಮಾಣದ ಸಾರಾಯಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

‘ಇನ್ನೂ ಐವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘85.5 ಲೀಟರ್‌ ಕಳ್ಳಬಟ್ಟಿ ಮತ್ತು ಅಪಾರ ಪ್ರಮಾಣದ ಭಾರತದಲ್ಲಿ ತಯಾರಿಸಲಾದ ವಿದೇಶಿ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೂರ್ವ ಚಂಪಾರಣ್ ಜಿಲ್ಲಾಡಳಿತ ಹೇಳಿಕೆಯಲ್ಲಿ ತಿಳಿಸಿದೆ.

‘ತುರ್ಕೌಲಿಯಾ, ಹರ್ಸಿದ್ಧಿ, ಸುಗೌಲಿ ಮತ್ತು ಪಹಾರ್ಪುರ್‌ದಲ್ಲಿ ಕಳ್ಳಬಟ್ಟಿ ಸಾರಾಯಿ ಕುಡಿದು ಕೆಲವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೂಡಲೇ ನಗರದ ವಿವಿಧ ಆಸ್ಪತ್ರೆಗಳಿಗೆ ಪೊಲೀಸರ ತಂಡವನ್ನು ಕಳುಹಿಸಲಾಗಿದೆ’ ಎಂದು ತಿಳಿಸಿದೆ.

ಪ್ರಕರಣ ಸಂಬಂಧಿಸಿದಂತೆ ಅಬಕಾರಿ ಇಲಾಖೆ ಅಧಿಕಾರಿಗಳೂ ತನಿಖೆ ಕೈಗೊಂಡಿದ್ದಾರೆ.

‘ಕಾನೂನು ಉಲ್ಲಂಘಿಸಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ತಿಳಿಸಿದ್ದಾರೆ.

ರಾಜ್ಯದಲ್ಲಿ 2016ರಿಂದ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT