ಸಾರಣ್: ಶಿಥಿಲವಾಗಿದ್ದ ಮನೆಯೊಂದರ ಚಾವಣಿ ಕುಸಿದು ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ಬಿಹಾರದ ಸಾರಣ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಇಂದು (ಸೋಮವಾರ) ತಿಳಿಸಿದ್ದಾರೆ.

ಅಕೀಲ್ಪುರದ ಪೊಲೀಸ್ ಠಾಣಾ ವ್ಯಾಪ್ತಿಯ ಮಾನಸಿ ಗ್ರಾಮದಲ್ಲಿ ಭಾನುವಾರ ರಾತ್ರಿ ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ಅವಘಡ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಮನೆ 30 ವರ್ಷದಷ್ಟು ಹಳೆಯದಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

ಅವಶೇಷಗಳಡಿಯಿಂದ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಸಾರಣ್ ಎಸ್ಎಸ್ಪಿ ಕುಮಾರ್ ಆಶಿಶ್ ತಿಳಿಸಿದ್ದಾರೆ.

ಸಂತ್ರಸ್ತರ ಕುಟುಂಬಕ್ಕೆ ಪರಿಹಾರಕ್ಕಾಗಿ ಸಂಬಂಧಿತ ದಾಖಲೆಗಳನ್ನು ಜಿಲ್ಲಾಡಳಿತಕ್ಕೆ ರವಾನಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
.ಅರ್ಕಾವತಿ ನದಿಯ ಹಾರೋಬೆಲೆ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ 2 ಕಾಡಾನೆ ಸಾವು.‘ಫಂಗ್–ವಾಂಗ್’ ಚಂಡಮಾರುತಕ್ಕೆ ಫಿಲಿಪ್ಪೀನ್ಸ್ ತತ್ತರ; 10 ಲಕ್ಷ ಮಂದಿ ಸ್ಥಳಾಂತರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.