ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ: ಪತ್ನಿ, ಇಬ್ಬರು ಮಕ್ಕಳು, ಅತ್ತೆಯನ್ನು ಕೊಂದ ವ್ಯಕ್ತಿ

Published 12 ಮೇ 2024, 6:00 IST
Last Updated 12 ಮೇ 2024, 6:00 IST
ಅಕ್ಷರ ಗಾತ್ರ

ಮಧುಬನಿ: ಮಲಗಿದ್ದ ಪತ್ನಿ, ಇಬ್ಬರು ಮಕ್ಕಳು ಹಾಗೂ ಅತ್ತೆಯನ್ನು ವ್ಯಕ್ತಿಯೊಬ್ಬ ಕೊಲೆ ಮಾಡಿದ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.

ಜಹಾಂಗೀರ್‌ಪುರ ಪೊಲೀಸ್‌ ಠಾಣೆ ವ್ಯಾಪ್ತಿಯ ಸುಖೇತ್ ಎನ್ನುವ ಗ್ರಾಮದಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮನೆಯಲ್ಲೇ ಇದ್ದ ಇನ್ನಿಬ್ಬರು ಮಕ್ಕಳು ಬೇರೊಂದು ಕೋಣೆಯಲ್ಲಿ ಅಡಗಿಕುಳಿತು ಜೀವ ಉಳಿಸಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

‘ಘಟನೆಯ ಬಗ್ಗೆ ಮಾಹಿತಿ ಲಭಿಸಿದ ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಆರೋಪಿಯ ಪತ್ತೆಗೆ ಬಲೆ ಬೀಸಲಾಗಿದೆ’ ಎಂದು ಜಹಾಂಗಿರ್‌ಪುರದ ಉಪ ಪೊಲೀಸ್‌ ವರಿಷ್ಠಾಧಿಕಾರಿ ಪವನ್ ಕುಮಾರ್ ತಿಳಿಸಿದ್ದಾರೆ.

ಪತ್ನಿಯ ತಾಯಿಯ ಮನೆಯಲ್ಲೇ ಪತಿ ಹಾಗೂ ಮಕ್ಕಳು ಕೆಲ ದಿನದಿಂದ ವಾಸವಿದ್ದರು. ಕೃತ್ಯದ ಹಿಂದಿನ ಕಾರಣ ತಿಳಿದುಬರಬೇಕಷ್ಟೇ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT