ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಹಾರದಲ್ಲಿ ಭಾರಿ ಮಳೆ: ಸಿಡಿಲು ಬಡಿದು ಒಂಬತ್ತು ಮಂದಿ ಸಾವು

Published 6 ಜುಲೈ 2024, 7:42 IST
Last Updated 6 ಜುಲೈ 2024, 7:42 IST
ಅಕ್ಷರ ಗಾತ್ರ

ಪಟ್ನಾ: ಕಳೆದ 24 ಗಂಟೆಗಳಲ್ಲಿ ಬಿಹಾರದ ಆರು ಜಿಲ್ಲೆಗಳಲ್ಲಿ ಸಿಡಿಲು ಬಡಿದು ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜೆಹಾನಾಬಾದ್ ಜಿಲ್ಲೆಯಲ್ಲಿ ಮೂವರು, ಮಾಧೇಪುರ ಜಿಲ್ಲೆಯಲ್ಲಿ ಇಬ್ಬರು, ಪೂರ್ವ ಚಂಪಾರಣ್, ರೋಹ್ತಾಸ್, ಸರನ್ ಮತ್ತು ಸುಪೌಲ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ.

ಘಟನೆ ಸಂಬಂಧ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ತಲಾ ₹4 ಲಕ್ಷ ಪರಿಹಾರ ಘೋಷಿಸಿದ್ದಾರೆ.

ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ವಿಪತ್ತು ನಿರ್ವಹಣಾ ಪಡೆ ನೀಡಿರುವ ಸೂಚನೆಗಳನ್ನು ಪಾಲಿಸುವಂತೆ ಸಿಎಂ ಜನರಿಗೆ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT