ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಹಾರದಲ್ಲಿ ನಕಲಿ ಮದ್ಯ ದುರಂತ: ಸಾವಿನ ಸಂಖ್ಯೆ 11ಕ್ಕೆ ಏರಿಕೆ

ನಳಂದ (ಬಿಹಾರ): ಜಿಲ್ಲೆಯಲ್ಲಿನಕಲಿ ಮದ್ಯ ಸೇವನೆಯಿಂದ ಮತ್ತೆಮೂವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ11ಕ್ಕೆ ಏರಿಕೆಯಾಗಿದೆ. ಶನಿವಾರ ಎಂಟು ಮಂದಿ ಸಾವಿಗೀಡಾಗಿದ್ದರು. ಪ್ರಕರಣಸಂಬಂಧ ಛೋಟಿ ಪಹರಿ ಪ್ರದೇಶದಲ್ಲಿ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ದುರಂತವನ್ನು ಅಂತ್ಯಗೊಳಿಸಲುಜಿಲ್ಲಾ ಪೊಲೀಸರುಛೋಟಿ ಪಹರಿ ಪ್ರದೇಶದಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ. ತನಿಖೆಯನ್ನು ಉತ್ತಮವಾಗಿ ನಡೆಸುವಉದ್ದೇಶದಿಂದ ಪ್ರದೇಶವನ್ನು ನಾಲ್ಕು ಭಾಗವಾಗಿ ವಿಭಾಗಿಸಿ ಕಾರ್ಯಾಚರಣೆ ಕೈಗೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಹನ್ನೊಂದು ಮಂದಿ ನಕಲಿ ಮದ್ಯ ಸೇವನೆಯಿಂದ ಮೃತಪಟ್ಟಿರುವುದು ಪ್ರಾಥಮಿಕ ತನಿಖೆಯಿಂದ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಶಶಾಂಕ್‌ ಶುಭಂಕರ್‌ ತಿಳಿಸಿದ್ದಾರೆ.

ನಳಂದ ಜಿಲ್ಲೆಯಲ್ಲಿ ಇದುವರೆಗೆ184 ಲೀಟರ್‌ ದೇಶೀಯ ಮದ್ಯ,225 ಲೀಟರ್‌ವಿದೇಶಿ ಮದ್ಯ ವಶಪಡಿಸಿಕೊಳ್ಳಲಾಗಿದ್ದು ಮತ್ತು34 ಮಂದಿಯನ್ನು ಬಂಧಿಸಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

ಈ ಮಧ್ಯೆ,ದುರಂತಕ್ಕೆ ಪೊಲೀಸರೇ ಹೊಣೆ ಎಂದು ಮೃತರ ಸಂಬಂಧಿಕರು ಆರೋಪಿಸಿದ್ದಾರೆ.ನಕಲಿ ಮದ್ಯ ಮಾರಾಟದ ಬಗ್ಗೆ ಸ್ಥಳೀಯ ಪೊಲೀಸ್‌ ಠಾಣೆಗೆಮಾಹಿತಿ ನೀಡಲಾಗಿತ್ತು. ಆದಾಗ್ಯೂ, ಪೊಲೀಸರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಲಿಲ್ಲ ಎಂದು ದೂರಿದ್ದಾರೆ.

ಸಂಬಂಧಪಟ್ಟ ಪೊಲೀಸ್‌ ಠಾಣೆಯ ಠಾಣಾಧಿಕಾರಿಯನ್ನು ಅಮಾನತುಗೊಳಿಸಲಾಗಿದ್ದು, ಎಂಟು ಮಂದಿ ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಯ ಬಳಿಕಕುಟುಂಬದವರಿಗೆ ನೀಡಲಾಗಿದೆ ಎಂದುನಳಂದ ಎಸ್‌ಪಿ ಅಶೋಕ್‌ ಮಿಶ್ರಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT