ಪಟ್ನಾ: ಬಿಹಾರದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬುವುದು ಮಂಗಳವಾರ (ಏ.14) ತಿಳಿಯಲಿದೆ ಎಂದು ಬಿಜೆಪಿ ನಾಯಕರು ಸೋಮವಾರ ತಿಳಿಸಿದ್ದಾರೆ. ಹೀಗಾಗಿ ಅಧಿಕಾರ ಬದಲಾವಣೆಯ ಪ್ರಕ್ರಿಯೆ ಸುಗಮಗೊಳಿಸಲು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಪಟ್ನಾಗೆ ಆಗಮಿಸುವ ಸಾಧ್ಯತೆ ಇದೆ.

ಕಳೆದ ತಿಂಗಳು ಮಾರ್ಚ್ 1ರಂದು 75 ವರ್ಷ ಪೂರೈಸಿದ ನಿತೀಶ್ ಕುಮಾರ್, ಒಂದು ವಾರದ ಹಿಂದೆ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ನಾಳೆ (ಏ.14) ಮಂಗಳವಾರ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಸಚಿವ ಸಂಪುಟ ಸಭೆಯ ಬಳಿಕ ನಿತೀಶ್ ಕುಮಾರ್ ಅವರು ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ. ಹೀಗಾಗಿ ಬಿಹಾರದ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂದು ಕುತೂಹಲ ಮನೆ ಮಾಡಿದೆ. ಈ ಹಿಂದೆ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿದ್ದರು.

ಮತ್ತೊಂದು ಕಡೆ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಉಪಮುಖ್ಯಮಂತ್ರಿಯಾಗಿ ನೇಮಕವಾಗುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ.

ನೂತನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಕುರಿತು ಮಾತನಾಡಿದ ಬಿಹಾರ ಬಿಜೆಪಿ ಘಟಕದ ಅಧ್ಯಕ್ಷ ಸಂಜಯ್ ಸರಾವೋಗಿ ‘ಶಿವರಾಜ್ ಸಿಂಗ್ ಚೌಹಾಣ್ ಅವರು ನಾಳೆ ಪಟ್ನಾಗೆ ಬರುತ್ತಿದ್ದಾರೆ. ಅವರ ಸಮ್ಮುಖದಲ್ಲಿ ಬಿಜೆಪಿ ಶಾಸಕರು ತಮ್ಮ ನಾಯಕರನ್ನು ಆಯ್ಕೆ ಮಾಡಲಿದ್ದಾರೆ’ ಎಂದಿದ್ದಾರೆ.

‘ಇದು ನಮ್ಮ ಪಾಲಿಗೆ ಭಾವನಾತ್ಮಕ ಕ್ಷಣ. ನಿತೀಶ್ ಕುಮಾರ್ ಅವರು ಹೊಸ ಸರ್ಕಾರಕ್ಕೆ ಮಾರ್ಗದರ್ಶನ ನೀಡುತ್ತಲೇ ಇರಲಿದ್ದಾರೆ ಎಂದು ನಾವು ಆಶಿಸುತ್ತೇವೆ’ ಎಂದು ರಾಜ್ಯದ ಮಾಜಿ ಅಧ್ಯಕ್ಷ ಹಾಗೂ ಸಚಿವ ದಿಲೀಪ್ ಜೈಸ್ವಾಲ್ ಹೇಳಿದ್ದಾರೆ.

2025ರ ಚುನಾವಣೆಯಲ್ಲಿ 89 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ, ಬಿಹಾರ ವಿಧಾನಸಭೆಯಲ್ಲಿ ಮೊದಲ ಬಾರಿಗೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಮಿತ್ರಪಕ್ಷ ಜೆಡಿ(ಯು) 85 ಸ್ಥಾನಗಳನ್ನು ಗಳಿಸಿತ್ತು. 243 ಕ್ಷೇತ್ರಗಳ ಬಿಹಾರ ವಿಧಾನಸಭೆಯಲ್ಲಿ ಎನ್ಡಿಎ 202 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಆರ್ಜೆಡಿ-ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ಗೆ ಸೋಲಾಗಿತ್ತು. ಎನ್ಡಿಎಯಲ್ಲಿ ಪ್ರಬಲವಾಗಿದ್ದರು ಬಿಹಾರದ ಮುಖ್ಯಮಂತ್ರಿ ಹುದ್ದೆ ಗಿಟ್ಟಿಸಿಕೊಳ್ಳುವ ಅವಕಾಶ ಬಿಜೆಪಿಗೆ ಸಿಕ್ಕಿದೆ.

ಸದ್ಯ ನೂತನ ಸಿಎಂ ರೇಸ್ನಲ್ಲಿ ಸಾಮ್ರಾಟ್ ಚೌಧರಿ ಅವರ ಹೆಸರು ಮುಂಚೂಣಿಯಲ್ಲಿದೆ. ಕೇಂದ್ರ ಸಚಿವ ನಿತ್ಯಾನಂದ ರೈ ಕೂಡ ಪ್ರಸ್ತುತ ಪಟ್ಟಿಯಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.