ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ | ಟ್ರಕ್‌–ಟೆಂಪೊ ಡಿಕ್ಕಿ; 9 ಮಂದಿ ಸಾವು

Published 21 ಫೆಬ್ರುವರಿ 2024, 4:57 IST
Last Updated 21 ಫೆಬ್ರುವರಿ 2024, 4:57 IST
ಅಕ್ಷರ ಗಾತ್ರ

ಲಖಿಸರಾಯ್‌: ಬಿಹಾರದ ಲಖಿಸರಾಯ್‌ ಜಿಲ್ಲೆಯಲ್ಲಿ ಬುಧವಾರ ನಸುಕಿನ ವೇಳೆ ಟ್ರಕ್ ಮತ್ತು ಟೆಂಪೊ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಖಿಸರಾಯ್-ಸಿಕಂದ್ರ ಮುಖ್ಯರಸ್ತೆಯ ಬಿಹರೌರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಟೆಂಪೊವಿನಲ್ಲಿ 15 ಜನರು ಪ್ರಯಾಣ ಮಾಡುತ್ತಿದ್ದರು ಎಂದು ಅವರು ತಿಳಿಸಿದರು.

‘ಲಖಿಸರಾಯ್‌-ಸಿಕಂದ್ರ ಮುಖ್ಯರಸ್ತೆಯಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಒಂಬತ್ತು ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ಪಂಕಜ್ ಕುಮಾರ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

‘ಮೃತರನ್ನು ವೀರ್ ಪಾಸ್ವಾನ್, ವಿಕಾಸ್ ಕುಮಾರ್, ವಿಜಯ್ ಕುಮಾರ್, ದಿಬಾನಾ ಪಾಸ್ವಾನ್, ಅಮಿತ್ ಕುಮಾರ್, ಮೋನು ಕುಮಾರ್, ಕಿಸಾನ್ ಕುಮಾರ್ ಮತ್ತು ಮನೋಜ್ ಗೋಸ್ವಾಮಿ ಎಂದು ಗುರುತಿಸಲಾಗಿದೆ’ ಎಂದರು.

‘ಮದುವೆ ಮುಗಿಸಿಕೊಂಡು ಟೆಂಪೊವಿನಲ್ಲಿ ಹಿಂದಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಟ್ರಕ್‌ ಅನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT