ಪಟ್ನಾ: ಮೂರು ದಿನಗಳ ಹಿಂದೆ ಮೋಕಾಮಾದಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಜನ್ ಸುರಾಜ್ ಬೆಂಬಲಿಗ ದುಲರ್ ಚಂದ್ ಯಾದವ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಪೊಲೀಸರು ಭಾನುವಾರ ಆಮಾಜಿ ಗ್ಯಾಂಗ್ಸ್ಟರ್, ರಾಜಕಾರಣಿ ಅನಂತ್ ಕುಮಾರ್ ಸಿಂಗ್ ಅವರನ್ನು ಬಂಧಿಸಿದ್ದಾರೆ.

ಎನ್ಡಿಎ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಜೆಡಿಯು ಅಭ್ಯರ್ಥಿಯನ್ನು ಭಾನುವಾರ ಬೆಳಗಿನ ಜಾವ ಮೊಕಾಮಾದ ಅವರ ಮನೆಯಿಂದ ಪೊಲೀಸರು ಬಂಧಿಸಿದ್ದಾರೆ.

ಪಿಟಿಐ ಜೊತೆ ಮಾತನಾಡಿದ ಪಾಟ್ನಾ ಎಸ್ಎಸ್ಪಿ ಕಾರ್ತಿಕೇಯ ಕೆ ಶರ್ಮಾ, ಅನಂತ್ ಬಂಧನವನ್ನು ದೃಢಪಡಿಸಿದರು. ಆದರೂ, ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲು ಅವರು ನಿರಾಕರಿಸಿದರು.

ಗುರುವಾರ ಪಟ್ನಾದ ಮೋಕಾಮಾ ಪ್ರದೇಶದಲ್ಲಿ ಜನ್ ಸುರಾಜ್ ಪಕ್ಷದ ಅಭ್ಯರ್ಥಿ ಪಿಯೂಷ್ ಪ್ರಿಯದರ್ಶಿ ಪರ ಪ್ರಚಾರ ನಡೆಸುತ್ತಿದ್ದಾಗ ಯಾದವ್ ಅನುಮಾನಾಸ್ಪದವಾಗಿ ಮೃತಪಟ್ಟಿದ್ದರು. ಮೋಕಾಮಾ ಪ್ರದೇಶದ ಭದೌರ್ ಮತ್ತು ಘೋಸ್ವರಿ ಪೊಲೀಸ್ ಠಾಣೆಗಳ ಸಮೀಪದಲ್ಲೇ ಈ ಘಟನೆ ನಡೆದಿತ್ತು.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ನಾಲ್ಕು ಎಫ್ಐಆರ್ಗಳನ್ನು ದಾಖಲಿಸಿದ್ದರು. ಮೃತನ ಮೊಮ್ಮಗ ಸಲ್ಲಿಸಿದ ದೂರಿನ ಆಧಾರದ ಮೇಲೆ ದಾಖಲಾಗಿರುವ ಎಫ್ಐಆರ್ಗಳ ಪೈಕಿ ಒಂದರಲ್ಲಿ ಅನಂತ್ ಸಿಂಗ್ ಸೇರಿದಂತೆ ಇತರ ನಾಲ್ವರನ್ನು ಆರೋಪಿಗಳೆಂದು ಹೆಸರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.