ಕತಿಹಾರ್: ಬಿಹಾರದ ಕತಿಹಾರ್ ಜಿಲ್ಲೆಯ ದಂಡಖೋರಾ ಪೊಲೀಸ್ ಠಾಣೆಯ ಮೇಲೆ ಗುಂಪೊಂದು ದಾಳಿ ನಡೆಸಿದ್ದು, ಐವರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾನೂನು ಉಲ್ಲಂಘನೆಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ವ್ಯಕ್ತಿಯನ್ನು ಪೊಲೀಸರ ಬಂಧನದಿಂದ ಬಿಡಿಸಲು ಶುಕ್ರವಾರ ಮಧ್ಯರಾತ್ರಿ ಜನರ ಗುಂಪೊಂದು ದಂಡಖೋರಾ ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿದೆ. ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದೆ. ಘಟನೆಯಲ್ಲಿ ಐವರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಕತಿಹಾರ್ ಪೊಲೀಸ್ ವರಿಷ್ಠಾಧಿಕಾರಿ ವೈಭವ್ ಶರ್ಮಾ ತಿಳಿಸಿದ್ದಾರೆ.

ಗುಂಪು ಚದುರಿಸಲು ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದರು. ಬಂಧಿತ ವ್ಯಕ್ತಿಯನ್ನು ಪೊಲೀಸ್ ಬಂಧನದಿಂದ ಬಿಡುಗಡೆ ಮಾಡಲು ಗುಂಪಿಗೆ ಸಾಧ್ಯವಾಗಲಿಲ್ಲ. ದಾಳಿಗೆ ಸಂಬಂಧಿಸಿದಂತೆ ಐದು ಜನರನ್ನು ಬಂಧಿಸಲಾಗಿದೆ ಎಂದು ಶರ್ಮಾ ಹೇಳಿದ್ದಾರೆ.

ಗಾಯಗೊಂಡ ಪೊಲೀಸರನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.