ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ ಸೀಟು ಹಂಚಿಕೆ | ಇನ್ನೆರಡು ದಿನಗಳಲ್ಲಿ ಅಂತಿಮವಾಗಲಿದೆ: ತೇಜಸ್ವಿ ಯಾದವ್‌

Published 18 ಮಾರ್ಚ್ 2024, 11:02 IST
Last Updated 18 ಮಾರ್ಚ್ 2024, 11:02 IST
ಅಕ್ಷರ ಗಾತ್ರ

ನವದೆಹಲಿ: ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ರಾಷ್ಟ್ರೀಯ ಜನತಾ ದಳವು (ಆರ್‌ಜೆಡಿ) ಲೋಕಸಭೆ ಚುನಾವಣೆಗೆ ಬಿಹಾರದಲ್ಲಿ ಸೀಟು ಹಂಚಿಕೆ ವಿಚಾರವಾಗಿ ಚರ್ಚೆ ನಡೆಸಿ ಇನ್ನೆರಡು ದಿನಗಳಲ್ಲಿ ಅಂತಿಮಗೊಳಿಸಲಿದೆ ಎಂದು ಪಕ್ಷದ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈಗಾಗಲೇ ಅನೇಕ ವಿಚಾರವಾಗಿ ಚರ್ಚೆ ನಡೆಸಲಾಗಿದೆ. ಆದರೆ 2– 3 ಕ್ಷೇತ್ರಗಳಲ್ಲಿ ಕೆಲವು ಸಮಸ್ಯೆಗಳಿವೆ, ಇನ್ನೆರಡು ದಿನಗಳಲ್ಲಿ ಬಗೆಹರಿಯಲಿದೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಿದ ಕೂಡಲೇ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಘಟನೆಗಳು ನಡೆಯಲು ಕಾರಣವೇನು?, ಇದಕ್ಕೆ ಯಾರು ಹೊಣೆ?, ಯುವಕರ ಭವಿಷ್ಯದ ಜತೆ ಚೆಲ್ಲಾಟವಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವುದು ಯಾವಾಗ? ಎಂದು ಯಾದವ್ ಪ್ರಶ್ನಿಸಿದ್ದಾರೆ.

ಬಿಹಾರ ಸಾರ್ವಜನಿಕ ಸೇವಾ ಆಯೋಗದ (ಬಿಪಿಎಸ್‌ಸಿ) ಶಿಕ್ಷಕರ ನೇಮಕಾತಿ ಪರೀಕ್ಷೆ 3ರ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಸುಮಾರು 300 ಆಕಾಂಕ್ಷಿಗಳನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಎದುರಿಸಲು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ), ಕಾಂಗ್ರೆಸ್ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಪಕ್ಷಗಳು ಕಾರ್ಯತಂತ್ರ ರೂಪಿಸುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT