ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ | ತಾಂತ್ರಿಕ ದೋಷ: ಭೂಸ್ಪರ್ಶ ಮಾಡಿದ ಸೇನೆ ವಿಮಾನ

Published 5 ಮಾರ್ಚ್ 2024, 14:24 IST
Last Updated 5 ಮಾರ್ಚ್ 2024, 14:24 IST
ಅಕ್ಷರ ಗಾತ್ರ

ಗಯಾ: ತಾಂತ್ರಿಕ ದೋಷದ ಕಾರಣ ವಾಯುಪಡೆಯ ಚಿಕ್ಕಗಾತ್ರದ ಯುದ್ಧವಿಮಾನವೊಂದು ಬಯಲಿನಲ್ಲಿ ಭೂಸ್ಪರ್ಶ ಮಾಡಿರುವ ಘಟನೆ ಬಿಹಾರದ ಗಯಾ ಜಿಲ್ಲೆಯ ಬಾಗ್ದಾಹ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಅದರಲ್ಲಿದ್ದ ಇಬ್ಬರು ಪೈಲಟ್‌ಗಳು ಸುರಕ್ಷಿತವಾಗಿ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇನಾಧಿಕಾರಿಗಳ ತರಬೇತಿ ಸಂಸ್ಥೆಯ (ಒಟಿಎ) ಯುದ್ಧವಿಮಾನ ಇದಾಗಿದೆ. ಹಾರಾಟ ಆರಂಭಿಸಿದ ಕೆಲವೇ ನಿಮಿಷಗಳಲ್ಲಿ ವಿಮಾನದಲ್ಲಿ ಸಮಸ್ಯೆ ಕಾಣಿಸಿಕೊಂಡು, ದೊಡ್ಡ ಸದ್ದು ಬಂದ ಕಾರಣ ಬಯಲಿನಲ್ಲಿ ಭೂಸ್ಪರ್ಶ ಮಾಡಿದೆ.

ವಿಮಾನದಲ್ಲಿದ್ದ ತರಬೇತಿ ಪೈಲಟ್‌ಗಳನ್ನು ಗ್ರಾಮಸ್ಥರು ರಕ್ಷಿಸಿ ಪೊಲೀಸರಿಗೆ ಮಾಹಿತಿ ನೀಡಿದರು. ಇಬ್ಬರಿಗೂ ಚಿಕ್ಕಪುಟ್ಟ ಗಾಯಗಳಾಗಿವೆ. ಘಟನೆಯಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಯಾವುದೇ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT