ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Bihar Politics: ಎಬಿವಿಪಿಯಿಂದ ಬೆಳೆದ ಸಿನ್ಹಾ

Published 28 ಜನವರಿ 2024, 23:30 IST
Last Updated 28 ಜನವರಿ 2024, 23:30 IST
ಅಕ್ಷರ ಗಾತ್ರ

ಪಟ್ನಾ: ಬಿಹಾರದಲ್ಲಿ ನಿತೀಶ್‌ ಕುಮಾರ್‌ ನೇತೃತ್ವದ ನೂತನ ಸರ್ಕಾರದ ಇಬ್ಬರು ಉಪ ಮುಖ್ಯಮಂತ್ರಿಗಳ ಪೈಕಿ ವಿಜಯ್‌ ಕುಮಾರ್‌ ಸಿನ್ಹಾ ಅವರೂ ಒಬ್ಬರು.

64 ವರ್ಷದ ಸಿನ್ಹಾ ಅವರು, ಪ್ರಭಾವಿ ಭೂಮಿಹಾರ್ ಸಮುದಾಯಕ್ಕೆ ಸೇರಿದ ಬಿಜೆಪಿ ನಾಯಕ. ಸತತ ಮೂರು ಬಾರಿ ಶಾಸಕರಾಗಿರುವ ಅವರು, ಈ ಹಿಂದೆ ಸಂಪುಟ ದರ್ಜೆ ಸಚಿವರಾಗಿ, ವಿಧಾನಸಭೆಯ ಸ್ಪೀಕರ್‌ ಆಗಿ, ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

ಲಖಿಸರಾಯ್ ಜಿಲ್ಲೆಯ ಶಾಲಾ ಶಿಕ್ಷಕರ ಮಗನಾದ ಸಿನ್ಹಾ ಅವರು ವಿದ್ಯಾರ್ಥಿಯಾಗಿದ್ದಾಗ ಎಬಿವಿಪಿಯಲ್ಲಿ ಸಕ್ರಿಯರಾಗಿದ್ದರು. ನಂತರ ಆರ್‌ಎಸ್‌ಎಸ್‌ನಲ್ಲಿ ಸಕ್ರಿಯರಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT