‘ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯ ತೃಪ್ತಿ ತಂದಿದೆ. ಮತದಾರರ ಪಟ್ಟಿಯ ‘ಶುದ್ಧೀಕರಣ’ ಕಾರ್ಯದಲ್ಲಿ 90 ಸಾವಿರಕ್ಕೂ ಅಧಿಕ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಶ್ಲಾಘನೀಯ ಕಾರ್ಯ ಮಾಡಿದ್ದಾರೆ’ ಎಂದು ಜ್ಞಾನೇಶ್ ಕುಮಾರ್ ಹೇಳಿದರು. ‘22 ವರ್ಷಗಳ ಬಳಿಕ ಬಿಹಾರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ನಡೆಸಲಾಗಿದೆ. ನೈಜ ಮತದಾರರ ಸಂಖ್ಯೆಯನ್ನು 7.89 ಕೋಟಿಯಿಂದ 7.43 ಕೋಟಿಗೆ ಇಳಿಸಲು ಇದರಿಂದ ಸಾಧ್ಯವಾಗಿದೆ’ ಎಂದು ಹೇಳಿದರು.