ಪಟ್ನಾ: ಕೇಂದ್ರ ಚುನಾವಣಾ ಆಯೋಗವು ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ನಡೆಸಿ ಸುಮಾರು 65 ಲಕ್ಷ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಿದೆ.

ರಾಜ್ಯದಲ್ಲಿ 7.89 ಕೋಟಿ ಮತದಾರರಿದ್ದರು. ಪರಿಷ್ಕರಣೆ ಬಳಿಕ ಈ ಸಂಖ್ಯೆ ಸುಮಾರು 7.24 ಕೋಟಿಗೆ ಇಳಿಕೆಯಾಗಿದೆ.

ಚುನಾವಣಾ ಆಯೋಗವು ಜೂನ್ 24ರಿಂದ ಜುಲೈ 25ರವರೆಗೆ ಮತದಾರ ಎಸ್ಐಆರ್ ನಡೆಸಿ, ನಕಲಿ ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಿದೆ.

‘7.89 ಕೋಟಿ ಮತದಾರರ ಪೈಕಿ ಸುಮಾರು 65 ಲಕ್ಷ ಮತದಾರರ ಹೆಸರನ್ನು ಪಟ್ಟಿಯಿಂದ ಅಳಿಸಿಹಾಕಲಾಗಿದೆ. ಸಾವು, ಶಾಶ್ವತ ವಲಸೆ, ಹಲವು ಕಡೆಗಳಲ್ಲಿ ನೋಂದಣಿ, ಪತ್ತೆಯಾಗದವರು– ಈ ನಾಲ್ಕು ವಿಭಾಗಗಳ ಅಡಿ ಕೆಲವು ಮತದಾರರ ಹೆಸರುಗಳನ್ನು ತೆಗೆದುಹಾಕಲಾಗಿದೆ’ ಎಂದು ಆಯೋಗದ ಮೂಲಗಳು ತಿಳಿಸಿವೆ.

‘ಸುಮಾರು 22 ಲಕ್ಷ ಮತದಾರರು ‘ಮೃತಪಟ್ಟಿದ್ದಾರೆ’ ಎಂದು ಘೋಷಿಸಲಾಗಿದೆ, 36 ಲಕ್ಷ ಮಂದಿ ಶಾಶ್ವತವಾಗಿ ವಲಸೆ ಹೋಗಿದ್ದಾರೆ ಅಥವಾ ಅವರ ಪತ್ತೆ ಸಾಧ್ಯವಾಗಿಲ್ಲ ಹಾಗೂ 7 ಲಕ್ಷ ಮತದಾರರು ಹಲವು ಕಡೆಗಳಲ್ಲಿ ನೋಂದಣಿ ಮಾಡಿಕೊಂಡಿರುವುದು ಪತ್ತೆಯಾಗಿದೆ’ ಎಂದು ತಿಳಿಸಿವೆ.

ದೇಶದಾದ್ಯಂತ ಪರಿಷ್ಕರಣೆ:

ಚುನಾವಣಾ ಆಯೋಗವು ಬಿಹಾರದ ಬಳಿಕ ದೇಶದಾದ್ಯಂತ ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆಸಲಿದೆ. ಬಿಹಾರದ ಕರಡು ಮತದಾರರ ಪಟ್ಟಿಯು ಆಗಸ್ಟ್ 1ರಂದು ಪ್ರಕಟಗೊಳ್ಳಲಿದೆ. ಈ ಪಟ್ಟಿಯು 7.89 ಕೋಟಿ ಮತದಾರರ ಬದಲಾಗಿ, 7.24 ಕೋಟಿ ಮತದಾರರ ಹೆಸರನ್ನು ಒಳಗೊಂಡಿರಲಿದೆ. ಅರ್ಹ ಮತದಾರರು ತಮ್ಮ ನೋಂದಣಿಯಲ್ಲಿನ ದೋಷಗಳನ್ನು ಸರಿಪಡಿಸಿಕೊಳ್ಳಲು ಒಂದು ತಿಂಗಳು ಅವಕಾಶ ಇರಲಿದೆ ಎಂದು ಮಾಹಿತಿ ನೀಡಿವೆ.

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಮಾಡುವ ಆಯೋಗದ ನಿರ್ಧಾರವನ್ನು ಕಾಂಗ್ರೆಸ್ ಸೇರಿದಂತೆ ಹಲವು ವಿರೋಧ ಪಕ್ಷಗಳು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿವೆ.

7.24 ಕೋಟಿ ಮತದಾರರಿಂದ ಅರ್ಜಿ ನಮೂನೆ ವಾಪಸ್

ನವದೆಹಲಿ (ಪಿಟಿಐ): ಬಿಹಾರದಲ್ಲಿ ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಮೊದಲ ಹಂತವು ಮುಕ್ತಾಯವಾಗಿದ್ದು 7.24 ಕೋಟಿ ಅಥವಾ ಶೇ 91.69ರಷ್ಟು ಮತದಾರರಿಂದ ಅರ್ಜಿ ನಮೂನೆಗಳನ್ನು ವಾಪಸ್ ಪಡೆಯಲಾಗಿದೆ ಎಂದು ಚುನಾವಣಾ ಆಯೋಗ ಭಾನುವಾರ ಮಾಹಿತಿ ನೀಡಿದೆ. ಮೊದಲ ಹಂತದ ಕಾರ್ಯಾಚರಣೆಗೆ ಸಂಬಂಧಿಸಿದ ಅರ್ಜಿಗಳ ವಿತರಣೆ ಮತ್ತು ವಾಪಸ್ ಪಡೆಯುವ ಪ್ರಕ್ರಿಯೆಯು ಜುಲೈ 25ಕ್ಕೆ ಕೊನೆಗೊಂಡಿದೆ. ‘ಆಗಸ್ಟ್ 1ರಿಂದ ಸೆಪ್ಟೆಂಬರ್1ರ ವರೆಗಿನ ಆಕ್ಷೇಪಣೆ ಅವಧಿಯಲ್ಲಿಯೂ ನೈಜ ಮತದಾರರ ಹೆಸರುಗಳನ್ನು ಪಟ್ಟಿಯಲ್ಲಿ ಸೇರಿಸಬಹುದು’ ಎಂದು ಆಯೋಗ ಸ್ಪಷ್ಟಪಡಿಸಿದೆ.

‘ಸುಪ್ರೀಂ’ನಲ್ಲಿ ಇಂದು ವಿಚಾರಣೆ

ನವದೆಹಲಿ (ಪಿಟಿಐ): ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು (ಎಸ್ಐಆರ್) ಪ್ರಶ್ನಿಸಿ ಸಲ್ಲಿಕೆಯಾಗಿರುವ ಹಲವು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಲಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜಾyffಮಾಲ್ಯಾ ಬಾಗ್ಚಿ ಅವರ ಪೀಠವು ಈ ಕುರಿತ ವಿಚಾರಣೆಯನ್ನು ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ. ‘ಅನರ್ಹ ವ್ಯಕ್ತಿಗಳನ್ನು ಮತದಾರರ ಪಟ್ಟಿಯಿಂದ ತೆಗೆಯುವ ಮೂಲಕ ಚುನಾವಣೆಯ ಪಾವಿತ್ರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಎಸ್ಐಆರ್ ಕೈಗೆತ್ತಿಕೊಳ್ಳಲಾಗಿದೆ’ ಎಂದು ಆಯೋಗ ಈಗಾಗಲೇ ತನ್ನ ಕಾರ್ಯವನ್ನು ಸಮರ್ಥಿಸಿಕೊಂಡಿದೆ. ಈ ಸಂಬಂಧ ಅದು ಪ್ರಮಾಣಪತ್ರವನ್ನೂ ಸಲ್ಲಿಸಿದೆ.

ಬಂಗಾಳದಲ್ಲಿ ಎಸ್ಐಆರ್ ನಡೆಸದಂತೆ ಕಾಂಗ್ರೆಸ್ ಪ್ರತಿಭಟನೆ

ಕೋಲ್ಕತ್ತ (ಪಿಟಿಐ): ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ನಡೆಸಬಾರದು ಎಂದು ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು. ಈ ವರ್ಷದ ಕೊನೆಯಲ್ಲಿ ನೆರೆಯ ಬಿಹಾರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಅಲ್ಲಿ ಎಸ್ಐಆರ್ ನಡೆಸಲಾಗುತ್ತಿದೆ. 2026ರ ಮಧ್ಯದಲ್ಲಿ ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆಯಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.