ಮಂಗಳವಾರ, 8 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶೀಘ್ರವೇ 10 ಲಕ್ಷ ಸರ್ಕಾರಿ ಉದ್ಯೋಗ: ಬಿಹಾರ ರಾಜ್ಯಪಾಲ ರಾಜೇಂದ್ರ ವಿ ಅರ್ಲೇಕರ್‌

Published : 26 ಜನವರಿ 2024, 16:27 IST
Last Updated : 26 ಜನವರಿ 2024, 16:27 IST
ಫಾಲೋ ಮಾಡಿ
Comments

ಪಟ್ನಾ: ರಾಜ್ಯದ ಯುವ ಜನರಿಗೆ 10 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಒದಗಿಸಲು ಬಿಹಾರ ಸರ್ಕಾರ ಬದ್ಧವಾಗಿದ್ದು, ಶೀಘ್ರದಲ್ಲಿಯೇ ಈ ಗುರಿ ಸಾಧಿಸಲಿದೆ ಎಂದು ರಾಜ್ಯಪಾಲ ರಾಜೇಂದ್ರ ವಿ. ಅರ್ಲೇಕರ್‌ ಶುಕ್ರವಾರ ಹೇಳಿದರು.

ಗಣರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇದುವರೆಗೂ 3.63 ಲಕ್ಷ ಜನರಿಗೆ ಸರ್ಕಾರಿ ಉದ್ಯೋಗ ಒದಗಿಸಲಾಗಿದ್ದು, ಈ ನೇಮಕಾತಿ ಆಂದೋಲನ ಮುಂದುವರಿದಿದೆ ಎಂದರು.

ಸರ್ಕಾರಿ ಉದ್ಯೋಗಗಳೇ ಅಲ್ಲದೆ, ಇತರ ಕ್ಷೆತ್ರಗಳಲ್ಲೂ 10 ಲಕ್ಷ ಉದ್ಯೋಗ ಸೃಷ್ಟಿಸಲು ಸರ್ಕಾರ ಕಾರ್ಯ ಪ್ರವೃತ್ತವಾಗಿದ್ದು,  ಈಗಾಗಲೇ ಅಂತಹ 5 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಾಗಿದೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ದಿವಂಗತ ಕರ್ಪೂರಿ ಠಾಕೂರ್‌ ಅವರಿಗೆ ‘ಭಾರತ ರತ್ನ’ ನೀಡುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ರಾಜ್ಯಪಾಲರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದರು. 

ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT