ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಹಾರ | ಮದುವೆಯಾಗಲು ನಿರಾಕರಿಸಿದ್ದಕ್ಕೆ ಪುರುಷನ ಮರ್ಮಾಂಗ ಕತ್ತರಿಸಿದ ಮಹಿಳೆ

Published 2 ಜುಲೈ 2024, 5:37 IST
Last Updated 2 ಜುಲೈ 2024, 5:37 IST
ಅಕ್ಷರ ಗಾತ್ರ

‍ಪಟ್ನಾ: ತನ್ನನ್ನು ಮದುವೆಯಾಗಲು ನಿರಾಕರಿಸಿದ್ದಕ್ಕಾಗಿ ಕೋಪಗೊಂಡ ಮಹಿಳೆಯೊಬ್ಬರು ಪರಿಚಯಸ್ಥ ವ್ಯಕ್ತಿಯ ಮರ್ಮಾಂಗ ಕತ್ತರಿಸಿರುವ ಘಟನೆ ಬಿಹಾರದ ಸರನ್ ಜಿಲ್ಲೆಯಲ್ಲಿ ನಡೆದಿದೆ.

ಘಟನೆ ನಡೆದ ಕೂಡಲೇ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.

‘26 ವರ್ಷದ ಮಹಿಳೆಯು 30 ವರ್ಷದ ವ್ಯಕ್ತಿಯೊಂದಿಗೆ ಎರಡು ವರ್ಷಗಳಿಂದ ಸಂಬಂಧ ಹೊಂದಿದ್ದರು. ಮದುವೆ ಮಾಡಿಕೊಳ್ಳುವುದಾಗಿ ಹೇಳಿ ಆತ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಮದುವೆಯಾಗಲು ನಿರಾಕರಿಸಿದ್ದರಿಂದ ಆತನ ಮರ್ಮಾಂಗ ಕತ್ತರಿಸಿದ್ದೇನೆ’ ಎಂದು ಮಹಿಳೆ ತಪ್ಪೊಪ್ಪಿಕೊಂಡಿರುವುದಾಗಿ ವರದಿಯಾಗಿದೆ.

ಜುಲೈ 1ರಂದು ಛಾಪ್ರಾದ ನ್ಯಾಯಾಲಯದಲ್ಲಿ ವಿವಾಹ ನೋಂದಣಿ ಮಾಡಿಕೊಳ್ಳಲು ಇವರಿಬ್ಬರು ನಿರ್ಧರಿಸಿದ್ದರು. ಆದರೆ, ವ್ಯಕ್ತಿ ನ್ಯಾಯಾಲಯಕ್ಕೆ ಬಂದಿರಲಿಲ್ಲ ಎಂದು ತಿಳಿದುಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT