ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಲ್ಕಿಸ್ ಬಾನು ಪ್ರಕರಣ: ಶರಣಾಗಲು ಕಾಲಾವಕಾಶ ಕೋರಿದ ಮೂವರು ದೋಷಿಗಳು

Published 18 ಜನವರಿ 2024, 6:32 IST
Last Updated 18 ಜನವರಿ 2024, 6:32 IST
ಅಕ್ಷರ ಗಾತ್ರ

ನವದೆಹಲಿ: ಶರಣಾಗಲು ಹೆಚ್ಚಿನ ಕಾಲಾವಕಾಶ ನೀಡಬೇಕು ಎಂದು ಕೋರಿ, ಬಿಲ್ಕಿಸ್‌ ಬಾನು ಸಾಮೂಹಿಕ ಅತ್ಯಾಚಾರ ಹಾಗೂ ಆಕೆಯ ಕುಟುಂಬಸ್ಥರ ಕೊಲೆ ಪ್ರಕರಣ ದೋಷಿಗಳ ಪೈಕಿ ಮೂವರು ಗುರುವಾರ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ.

ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ ಹಾಗೂ ಸಂಜಯ್‌ ಕರೊಲ್ ಅವರ ಪೀಠದ ಮುಂದೆ ಮನವಿ ಸಲ್ಲಿಸಲಾಗಿದ್ದು, ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ಅವರ ಪೀಠದ ಮುಂದೆ ಇಡುವಂತೆ ರಿಜಿಸ್ಟ್ರಿಗೆ ಸೂಚಿಸಲಾಗಿದೆ.

ಶರಣಾಗಲು ಹೆಚ್ಚಿನ ಕಾಲಾವಕಾಶ ನೀಡಬೇಕು ಎಂದು ಮೂವರು ಕೋರಿದ್ದಾರೆ. ಆದರೆ ಪೀಠ ಪುನರ್‌ ರಚನೆ ಆಗಬೇಕಾಗಿರುವುದರಿಂದ, ರಿಜಿಸ್ಟ್ರಿ ಸಿಜೆಐ ಅವರಿಂದ ನಿರ್ದೇಶನ ತೆಗೆದುಕೊಳ್ಳಬೇಕು’ ಎಂದು ಪೀಠ ಹೇಳಿದೆ.

ಪ್ರಕರಣದ 11 ದೋಷಿಗಳನ್ನು ಬಿಡುಗಡೆ ಮಾಡಿದ ಗುಜರಾತ್‌ ಸರ್ಕಾರದ ನಿರ್ಧಾರವನ್ನು ಜನವರಿ 8ರಂದು ಸುಪ್ರೀಂ ಕೋರ್ಟ್‌ ರದ್ದು ಮಾಡಿತ್ತು. ಅಲ್ಲದೆ ಎರಡು ವಾರದೊಳಗೆ ಶರಣಾಗಬೇಕು ಎಂದು ಆದೇಶಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT