ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಿಧ ಕ್ಷೇತ್ರಗಳಲ್ಲಿ ಭಾರತ ಪ್ರಗತಿ: ಬಿಲ್‌ಗೇಟ್ಸ್ ಶ್ಲಾಘನೆ 

Last Updated 4 ಮಾರ್ಚ್ 2023, 13:34 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ); ಆರೋಗ್ಯ, ಅಭಿವೃದ್ಧಿ ಮತ್ತು ಹವಾಮಾನದಂತಹ ಕ್ಷೇತ್ರಗಳಲ್ಲಿ ಭಾರತ ಸಾಧಿಸುತ್ತಿರುವ ಪ್ರಗತಿ ಶ್ಲಾಘಿಸಿರುವ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್, ನಾವೀನ್ಯತೆಯಲ್ಲಿ ಹೂಡಿಕೆ ಮಾಡಿದಾಗ ಏನೆಲ್ಲ ಸಾಧ್ಯ ಎಂಬುದನ್ನು ದೇಶ ತೋರಿಸುತ್ತಿದೆ ಎಂದು ಹೇಳಿದರು.

ಸುರಕ್ಷಿತ, ಪರಿಣಾಮಕಾರಿ ಮತ್ತು ಕೈಗೆಟಕುವ ಲಸಿಕೆಗಳನ್ನು ತಯಾರಿಸುವ ಅದ್ಭುತ ಸಾಮರ್ಥ್ಯಕ್ಕಾಗಿ ಭಾರತವನ್ನು ಶ್ಲಾಘಿಸಿದರು. ಅವುಗಳಲ್ಲಿ ಕೆಲವು ಗೇಟ್ಸ್‌ ಫೌಂಡೇಷನ್‌ನಿಂದ ಸಹಕಾರ ಲಭಿಸಿದೆ. ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಲಕ್ಷಾಂತರ ಜೀವಗಳನ್ನು ಉಳಿಸುವುದರ ಜತೆಗೆ ವಿಶ್ವದಾದ್ಯಂತ ಇತರ ರೋಗಗಳನ್ನು ತಡೆಗಟ್ಟಿವೆ ಎಂದು ಹೇಳಿದರು.

ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಷನ್‌ನ ಸಹ ಅಧ್ಯಕ್ಷರಾಗಿರುವ ಬಿಲ್ ಗೇಟ್ಸ್, ಭಾರತ ಪ್ರವಾಸದ ಸಂದರ್ಭದಲ್ಲಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

‘ಬಿಲ್ ಗೇಟ್ಸ್ ಅವರನ್ನು ಭೇಟಿ ಮಾಡಲು ಮತ್ತು ಪ್ರಮುಖ ವಿಷಯಗಳ ಬಗ್ಗೆ ವ್ಯಾಪಕ ಚರ್ಚೆ ನಡೆಸಲು ಸಂತೋಷವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಟ್ವೀಟ್ ಮಾಡಿದ್ದಾರೆ.

‘ಜಗತ್ತು ಅನೇಕ ಸವಾಲುಗಳನ್ನು ಎದುರಿಸುತ್ತಿರುವ ವೇಳೆ ಭಾರತದಂತಹ ಕ್ರಿಯಾತ್ಮಕ ಮತ್ತು ಸೃಜನಶೀಲ ಸ್ಥಳಕ್ಕೆ ಭೇಟಿ ನೀಡುವುದು ಸ್ಫೂರ್ತಿದಾಯಕವಾಗಿದೆ’ ಎಂದು ಬಿಲ್ ಗೇಟ್ಸ್ ಬರೆದಿದ್ದಾರೆ.

ಸಾಂಕ್ರಾಮಿಕ ರೋಗದಿಂದಾಗಿ ಕಳೆದ ಮೂರು ವರ್ಷಗಳಿಂದ ಹೆಚ್ಚು ಪ್ರಯಾಣಿಸದಿದ್ದರೂ ಮೋದಿ ಅವರೊಂದಿಗೆ ಸಂಪರ್ಕದಲ್ಲಿದ್ದೇನೆ. ವಿಶೇಷವಾಗಿ ಕೋವಿಡ್ ಲಸಿಕೆಗಳನ್ನು ಅಭಿವೃದ್ಧಿಪಡಿಸುವ ಮತ್ತು ಭಾರತದ ಆರೋಗ್ಯ ವ್ಯವಸ್ಥೆಗಳಲ್ಲಿ ಹೂಡಿಕೆ ಮಾಡುವ ಬಗ್ಗೆ ಎಂದು ಅವರು ಹೇಳಿದರು.‌

ಗತಿ ಶಕ್ತಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಗೇಟ್ಸ್, ಡಿಜಿಟಲ್ ತಂತ್ರಜ್ಞಾನವು ಸರ್ಕಾರಗಳು ಉತ್ತಮವಾಗಿ ಕಾರ್ಯನಿರ್ವಹಿಸಲು ಹೇಗೆ ಸಹಾಯ ಮಾಡುತ್ತದೆ ಎಂಬುದಕ್ಕೆ ಇದು ಉತ್ತಮ ಉದಾಹರಣೆಯಾಗಿದೆ ಎಂದು ಹೇಳಿದರು.

ಭಾರತ ಜಿ 20 ಅಧ್ಯಕ್ಷತೆ ವಹಿಸಿಕೊಂಡಿರುವ ಬಗ್ಗೆ ಮೋದಿ ಅವರೊಂದಿಗೆ ಚರ್ಚಿಸಿದ್ದೇನೆ. ದೇಶದಲ್ಲಿ ಅಭಿವೃದ್ಧಿಪಡಿಸಿದ ಆವಿಷ್ಕಾರಗಳು ಜಗತ್ತಿಗೆ ಹೇಗೆ ಪ್ರಯೋಜನ ನೀಡುತ್ತವೆ ಎಂಬುದನ್ನು ತೋರಿಸಲು ಹಾಗೂ ಅವುಗಳನ್ನು ಅಳವಡಿಸಿಕೊಳ್ಳಲು ಇತರ ದೇಶಗಳಿಗೆ ಸಹಾಯ ಮಾಡಲು ಅತ್ಯುತ್ತಮ ಅವಕಾಶವಾಗಿದೆ ಎಂದು ಗೇಟ್ಸ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT