ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭುವನೇಶ್ವರ: ಕೊಳೆಗೇರಿ ಪ್ರದೇಶಗಳಿಗೆ ಬಿಲ್ ಗೇಟ್ಸ್ ಭೇಟಿ, ಸ್ಥಳೀಯರೊಂದಿಗೆ ಸಂವಾದ

Published 28 ಫೆಬ್ರುವರಿ 2024, 7:47 IST
Last Updated 28 ಫೆಬ್ರುವರಿ 2024, 7:47 IST
ಅಕ್ಷರ ಗಾತ್ರ

ಭುವನೇಶ್ವರ: ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಅವರು ಇಂದು (ಬುಧವಾರ) ಬೆಳಿಗ್ಗೆ ಭುವನೇಶ್ವರದ ಕೊಳೆಗೇರಿ ಪ್ರದೇಶಗಳಿಗೆ ಭೇಟಿ ನೀಡಿದ್ದು, ಅಲ್ಲಿನ ನಿವಾಸಿಗಳೊಂದಿಗೆ ಸಂವಾದ ನಡೆಸಿದ್ದಾರೆ.

‘ಮಾ ಮಂಗಳ ಬಸ್ತಿ’ಯಲ್ಲಿರುವ ಬಿಜು ಆದರ್ಶ್ ಕಾಲೊನಿಗೆ ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಅವರು ಭೇಟಿ ನೀಡಿದ್ದರು.

ಸ್ಥಳೀಯರ ಯೋಗ ಕ್ಷೇಮ ವಿಚಾರಿಸಿದ ಗೇಟ್ಸ್, ಅಲ್ಲಿನ ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರು ಹಾಗೂ ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಫಲಾನುಭವಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ.

ಇದೇ ವೇಳೆ ಮಾತನಾಡಿದ ‌‌ರಾಜ್ಯ ಅಭಿವೃದ್ಧಿ ಆಯುಕ್ತೆ ಅನುಗಾರ್ಗ್, ‘ಕೊಳೆಗೇರಿ ನಿವಾಸಿಗಳಿಗೆ ಭೂಮಿಯ ಹಕ್ಕು, ನಲ್ಲಿ ನೀರಿನ ಸಂಪರ್ಕ, ಶೌಚಾಲಯ ಮತ್ತು ವಿದ್ಯುತ್ ಸಂಪರ್ಕ ಸೇರಿದಂತೆ ಮೂಲ ಸೌಲಭ್ಯಗಳನ್ನು ಒದಗಿಸುವ ಮೂಲಕ ಕೊಳಚೆ ಪ್ರದೇಶವನ್ನು ಮಾದರಿ ಕಾಲೊನಿಯಾಗಿ ಪರಿವರ್ತಿಸಲಾಗಿದೆ‘ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಯೋಜನೆಗಳಿಂದ ನಮ್ಮ ಜೀವನಶೈಲಿಯಲ್ಲಿ ಆಗುತ್ತಿರುವ ಬದಲಾವಣೆಗಳ ಬಗ್ಗೆ ಬಿಲ್ ಗೇಟ್ಸ್ ವಿಚಾರಿಸಿದರು ಎಂದು ಕಾಲೊನಿಯ ನಿವಾಸಿಯೊಬ್ಬರು ಹೇಳಿದ್ದಾರೆ.

ಬಿಲ್ ಗೇಟ್ಸ್ ಅವರು ಇಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.

ಒಡಿಶಾ ಸರ್ಕಾರದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ 'ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್‌' ಕೆಲಸ ಮಾಡುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT