ನವದೆಹಲಿ: ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯದ (ಇಡಿ) ನಿರ್ದೇಶಕರ ಅಧಿಕಾರಾವಧಿಯನ್ನು ಎರಡು ವರ್ಷಗಳಿಂದ ಗರಿಷ್ಠ ಐದು ವರ್ಷಗಳವರೆಗೆ ವಿಸ್ತರಿಸುವ ಎರಡು ಮಸೂದೆಗಳನ್ನು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳ ಸದಸ್ಯರ ವಿರೋಧದ ನಡುವೆಯೂ ಲೋಕಸಭೆಯಲ್ಲಿ ಶುಕ್ರವಾರ ಮಂಡಿಸಿತು.

ಕೇಂದ್ರೀಯ ಜಾಗೃತ ಆಯೋಗ (ತಿದ್ದುಪಡಿ) ಮಸೂದೆ ಮತ್ತು ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ (ತಿದ್ದುಪಡಿ) ಮಸೂದೆಯನ್ನು ಕೇಂದ್ರ ಸಿಬ್ಬಂದಿ ಖಾತೆಯ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಲೋಕಸಭೆಯಲ್ಲಿ ಮಂಡಿಸಿದರು.

ಸಿಬಿಐ ಮತ್ತು ಇ.ಡಿ ನಿರ್ದೇಶಕರ ಹುದ್ದೆಯ ಅಧಿಕಾರದ ಅವಧಿಯನ್ನು ಐದು ವರ್ಷಗಳಿಗೆ ಹೆಚ್ಚಿಸಿ ಸರ್ಕಾರ ಕಳೆದ ತಿಂಗಳು ಸುಗ್ರೀವಾಜ್ಞೆ ಹೊರಡಿಸಿದೆ.

ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷದ ಸದಸ್ಯರು ಈ ಮಸೂದೆ ಮಂಡನೆಯನ್ನು ವಿರೋಧಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.