ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರೀಕ್ಷಾ ಅಕ್ರಮಕ್ಕೆ 10 ವರ್ಷ ಜೈಲು: ನೂತನ ಮಸೂದೆ ಮಂಡನೆ ಸಾಧ್ಯತೆ

Published 31 ಜನವರಿ 2024, 23:30 IST
Last Updated 31 ಜನವರಿ 2024, 23:30 IST
ಅಕ್ಷರ ಗಾತ್ರ

ನವದೆಹಲಿ: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ಎಸಗುವವರಿಗೆ ಗರಿಷ್ಠ 10 ವರ್ಷ ಜೈಲು ಹಾಗೂ ₹ 1 ಕೋಟಿ ವರೆಗೆ ದಂಡ ವಿಧಿಸುವುದಕ್ಕೆ ಅವಕಾಶ ಕಲ್ಪಿಸುವ ಹೊಸ ಮಸೂದೆಯನ್ನು ಸರ್ಕಾರ, ಸಂಸತ್‌ನಲ್ಲಿ ಬರುವ ಸೋಮವಾರ ಮಂಡಿಸುವ ಸಾಧ್ಯತೆ ಇದೆ.

ಸಾರ್ವಜನಿಕ ಪರೀಕ್ಷೆ (ಅಕ್ರಮಗಳ ತಡೆ) ಮಸೂದೆ,2024ಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಪ್ರಸಕ್ತ ಬಜೆಟ್‌ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆ ಇದೆ. ಆದರೆ, ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಬೇಕಿದೆ ಎಂದು ಮೂಲಗಳು ಹೇಳಿವೆ.

ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಈ ಮಸೂದೆಯನ್ನು ಸಿದ್ಧಪಡಿಸಿಲ್ಲ. ಪರೀಕ್ಷಾ ಅಕ್ರಮಗಳಲ್ಲಿ ತೊಡಗುವ ಸಂಘಟಿತ ಗುಂಪುಗಳು, ಮಾಫಿಯಾ ಹಾಗೂ ಇವುಗಳೊಂದಿಗೆ ಕೈಜೋಡಿಸುವ ಸರ್ಕಾರಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಉದ್ದೇಶದಿಂದ ಈ ಮಸೂದೆಯನ್ನು ಮಂಡಿಸಲಾಗುತ್ತಿದೆ ಎಂದು ಮೂಲಗಳು ಹೇಳಿವೆ.

ರಾಜಸ್ಥಾನದಲ್ಲಿ ಶಿಕ್ಷಕರ ನೇಮಕಾತಿಗಾಗಿ ನಿಗದಿಯಾಗಿದ್ದ ಸಿಇಟಿ, ಹರಿಯಾಣದಲ್ಲಿ ಗ್ರೂಪ್‌ ಡಿ ಹುದ್ದೆಗಳ ನೇಮಕ, ಗುಜರಾತ್‌ನಲ್ಲಿ ಕಿರಿಯ ಸಹಾಯಕರು ಹಾಗೂ ಬಿಹಾರದಲ್ಲಿ ಕಾನ್‌ಸ್ಟೆಬಲ್‌ಗಳ ನೇಮಕಕ್ಕೆ ನಡೆಯಬೇಕಿದ್ದ ಪರೀಕ್ಷೆಗಳನ್ನು ಇತ್ತೀಚೆಗೆ ರದ್ದು ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಮಸೂದೆಯನ್ನು ಮಂಡಿಸಲು ಮುಂದಾಗಿದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT