ಕೋಯಿಕ್ಕೋಡ್: ವಿಶ್ವದಾದ್ಯಂತ ಕೋವಿಡ್-19ಗೆ ಸಾವಿರಾರು ಜನರು ಪ್ರಾಣ ಕಳೆದುಕೊಂಡಿರುವ ಬೆನ್ನಲ್ಲೇ ಇದೀಗ ಹಕ್ಕಿ ಜ್ವರದ ಭೀತಿ ಎದುರಾಗಿದೆ.

ಪಶ್ಚಿಮ ಕೊಡಿಯಾಥುರ್‌ನ ಒಂದು ಕೋಳಿ ಫಾರ್ಮ್ ಮತ್ತು ಕೋಯಿಕ್ಕೋಡ್‌ನ ವೆಂಗೇರಿಯಲ್ಲಿನ ಖಾಸಗಿ ನರ್ಸರಿಯಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕೇರಳ ರಾಜ್ಯ ಪಶುಸಂಗೋಪನಾ ಇಲಾಖೆ ನಿನ್ನೆ ತಿರುವನಂತಪುರದಲ್ಲಿ ಸಚಿವ ಕೆ.ರಾಜು ಅವರ ನೇತೃತ್ವದಲ್ಲಿ ತುರ್ತು ಸಭೆ ನಡೆಸಿತು.

ಸದ್ಯ ಹಕ್ಕಿಜ್ವರವು ನಿಯಂತ್ರಣಕ್ಕೆ ಬಂದಿದ್ದು, ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದು, ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

2016ರ ನಂತರ ರಾಜ್ಯದಲ್ಲಿ ಏಕಾಏಕಿ ಕಾಣಿಸಿಕೊಂಡಿರುವ ಮೊದಲ ಹಕ್ಕಿಜ್ವರ ಪ್ರಕರಣ ಇದಾಗಿದೆ. ಪ್ರತಿದಿನ ಇನ್ನೂರು ಕೋಳಿಗಳು ಸಾಯಲು ಪ್ರಾರಂಭಿಸಿದಾಗ ಹಕ್ಕಿಜ್ವರದ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿತ್ತು.

ಗುರುವಾರ ಹಕ್ಕಿಜ್ವರದಿಂದ ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಯಿತು. ಕೂಡಲೇ ನಾವು ಕಣ್ಣೂರು ಪ್ರಯೋಗಾಲಯಕ್ಕೆ ಕಳುಹಿಸಲಾಯಿತು ಮತ್ತು ಬಳಿಕ ಭೋಪಾಲ್ ಪ್ರಯೋಗಾಲಯಕ್ಕೆ ಮಾದರಿಗಳನ್ನು ಕಳುಹಿಸಲಾಯಿತು. ಮುಖ್ಯಕಾರ್ಯದರ್ಶಿಯಿಂದ ನಾವು ಇನ್ನೂ ಮಾರ್ಗಸೂಚಿಗಳನ್ನು ಸ್ವೀಕರಿಸಿಲ್ಲ ಎಂದು ಪಶು ಸಂಗೋಪನಾ ಅಧಿಕಾರಿ ಡಾ. ಕೆ. ಸಿಂಧು ತಿಳಿಸಿದ್ದಾರೆ.

ವರದಿಗಳ ಪ್ರಕಾರ ಕೋಳಿಗಳಲ್ಲಿ ಹಕ್ಕಿಜ್ವರವಿರುವುದು ಭೋಪಾಲ್ ಪ್ರಯೋಗಾಲಯದಿಂದ ದೃಢಪಟ್ಟಿದೆ.
ಸ್ಥಳೀಯ ಆಡಳಿತ ಸಂಸ್ಥೆಗಳು ಹೆಚ್ಚಿನ ಎಚ್ಚರಿಕೆ ವಹಿಸುತ್ತಿದ್ದು, ವಿಶೇಷ ತಜ್ಞರ ತಂಡ ಸೋಂಕು ಪೀಡಿತ ಕೋಳಿ ಸಾಕಣೆ ಕೇಂದ್ರಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಧ್ಯಯನ ನಡೆಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.