ಅಮರಾವತಿ: ಆಂಧ್ರಪ್ರದೇಶದ ಗ್ರಾಮವೊಂದರಲ್ಲಿ ಹಕ್ಕಿಜ್ವರ (ಎಚ್5ಎನ್1) ವೈರಸ್ ಹರಡಿರುವುದನ್ನು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಹೀಗಾಗಿ, ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಕಾನೂರು ಅಗ್ರಹಾರಂ ಗ್ರಾಮದಲ್ಲಿ ಕೆಲವು ದಿನಗಳ ಹಿಂದೆ ಸುಮಾರು 62,000 ಕೋಳಿಗಳು ಮೃತಪಟ್ಟಿದ್ದವು. ಕೋಳಿಗಳ ಸರಣಿ ಸಾವಿನ ಕಾರಣ ಸತ್ತ ಕೋಳಿಗಳ ಮಾದರಿಯನ್ನು ಮಧ್ಯಪ್ರದೇಶದ ಭೋಪಾಲ್ನಲ್ಲಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೈ ಸೆಕ್ಯೂರಿಟಿ ಅನಿಮಲ್ ಡಿಸೀಸ್ (ನಿಹ್ಸಾದ್) ಪ್ರಯೋಗಾಲಯದಲ್ಲಿ ಪರೀಕ್ಷೆಗೊಳಪಡಿಸಲಾಗಿದ್ದು, ಸತ್ತ ಕೋಳಿಗಳಲ್ಲಿ ಹಕ್ಕಿಜ್ವರ ಇದ್ದುದು ಖಚಿತವಾಗಿದೆ.

ಹಕ್ಕಿಜ್ವರ ನಿಯಂತ್ರಣಕ್ಕಾಗಿ ಪೂರ್ವ ಗೋದಾವರಿ ಜಿಲ್ಲೆಯ ಜಿಲ್ಲಾಧಿಕಾರಿ ಪಿ. ಪ್ರಶಾಂತಿ ಅವರು ಮಂಗಳವಾರ ಪೊಲೀಸರು, ಕಂದಾಯ, ಪಶು ಸಂಗೋಪನೆ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು.

ಹಕ್ಕಿಜ್ವರ ಕಾಣಿಸಿಕೊಂಡ ಕಾನೂರು ಗ್ರಾಮದ ಒಂದು ಕಿ.ಮೀ. ವ್ಯಾಪ್ತಿಯನ್ನು ಅಪಾಯಕಾರಿ ವಲಯ (ರೆಡ್ ಝೋನ್) ಎಂದು ಮತ್ತು 10 ಕಿ.ಮೀ. ವ್ಯಾಪ್ತಿಯನ್ನು ಕಣ್ಗಾವಲು ವಲಯ ಎಂದು ಗುರುತಿಸಲಾಗಿದೆ. ಹಕ್ಕಿಜ್ವರಕ್ಕೆ ಸಿಲುಕಿದ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.